ನಿಯಂತ್ರಣಕ್ಕೆ ಬಂದಿಲ್ಲ ದೆಹಲಿ ಹಿಂಸಾಚಾರ, ಸೇನೆ ನಿಯೋಜನೆಗೆ ಕೇಜ್ರಿವಾಲ್ ಒತ್ತಾಯ

ಹೊಸದಿಲ್ಲಿ: ಕಳೆದ ಎರಡು ದಿನಗಳಿಂದ ರಾಷ್ಟ್ರ ರಾಜಧಾನಿ ಹೊತ್ತಿ ಉರಿಯುತ್ತಿದ್ದು, ಗಲಭೆ ನಿಯಂತ್ರಣ ಮಾಡಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಗಲಭೆ ನಿಯಂತ್ರಣ ಮಾಡಲು ಪೊಲೀಸರು ವಿಫಲರಾದ ಹಿನ್ನೆಲೆಯಲ್ಲಿ ಸೇನೆಯನ್ನು ನಿಯೋಜನೆ ಮಾಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ದೆಹಲಿಯ ಗಲಭೆ ಪೀಡಿತ ಪ್ರದೇಶಗಳಲ್ಲಿ ಕಠಿಣ ಕರ್ಫ್ಯೂ ಹೇರುವಂತೆ ಆಗ್ರಹಿಸಿರುವ ಅವರು, ಈ ಕುರಿತಾಗಿ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ. 20 ಜನರನ್ನು ಬಲಿತೆಗೆದುಕೊಂಡ ಹಿಂಸಾಚಾರ ಹಲವು ಕಡೆಗಳಲ್ಲಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಪಿಸ್ತೂಲು, ಮಚ್ಚು, ಚೂರಿಗಳಂತಹ ಮಾರಕಾಸ್ತ್ರಗಳೊಂದಿಗೆ ಬೀದಿಗಿಳಿದಿರುವ ಜನರನ್ನು ನಿಯಂತ್ರಣ ಮಾಡುವುದು ಪೊಲೀಸರಿಗೂ ಸವಾಲಿನ ಸಂಗತಿಯಾಗಿದೆ. ಸೀಲಂಪುರ್‌ ಪ್ರದೇಶದಲ್ಲಿ ಗಲಭೆ ನಿಯಂತ್ರಣಕ್ಕೆ ಬಂದರೂ ಮತ್ತೆ ಭುಗಿಲೇಳುವ ಸಾಧ್ಯತೆ ಇದೆ. ಜಾಫ್ರಾಬಾದ್ ಪ್ರದೇಶಗಳಲ್ಲಿ ಮತ್ತೆ ಕಲ್ಲು ತೂರಾಟ ನಡೆಯುತ್ತಿದೆ. ಹಲವು ಕಡೆಗಳಲ್ಲಿ ಪೊಲೀಸರಿಗೂ ತೆರಳಲು ಸಾಧ್ಯವಾಗುತ್ತಿಲ್ಲ. ಇದು ಗಲಭೆಕೋರರಿಗೆ ನೆರವಾಗಿ ಮಾರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಗಲಭೆಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಸೇನೆಯನ್ನು ನಿಯೋಜನೆ ಮಾಡಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಆಗ್ರಹಿಸಿದ್ದಾರೆ.


from India & World News in Kannada | VK Polls https://ift.tt/2uzX2f4

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...