ಪ್ರಧಾನಿ ಮೋದಿಯಿಂದ ಟ್ರಂಪ್‌ ಸ್ಫೂರ್ತಿ ಪಡೆಯೋ ಸಮಯವಿದು! ಸಿದ್ದು ಟ್ವೀಟ್‌ ಟಾಂಗ್

ಬೆಂಗಳೂರು: ಅಮೆರಿಕಾದ ಅಧ್ಯಕ್ಷ ಭಾರತಕ್ಕೆ ಆಗಮಿಸಿದ್ದು ಅಹಮದಾಬಾದ್‌ನಲ್ಲಿ ದೊಡ್ಡಣ್ಣನಿಗೆ ಭವ್ಯ ಸ್ವಾಗತ ನೀಡಲಾಗಿದೆ.ಸ್ವತಃ ಪ್ರಧಾನಿ ನರೇಂದ್ರ ಮೋದಿ ಶಿಷ್ಟಾಚಾರ ಮುರಿದು ಟ್ರಂಪ್‌ನ್ನು ಸ್ವಾಗತಿಸಿದ್ದಾರೆ. ಈ ನಡುವೆ ಮಾಜಿ ಸಿಎಂ ಟ್ವೀಟ್‌ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಟಾಂಗ್‌ ಕೊಟ್ಟಿದ್ದಾರೆ. “ಡೊನಾಲ್ಡ್‌ ಟ್ರಂಪ್‌ಗೆ ಇದು ಪ್ರಧಾನಿ ನರೇಂದ್ರ ಮೋದಿಯಿಂದ ಸ್ಫೂರ್ತಿ ಪಡೆಯುವ ಸಮಯವಾಗಿದೆ. ಜನಸಾಮಾನ್ಯರ ನೈಜ ಜೀವನದ ಸ್ಥಿತಿಯನ್ನು ಮರೆಮಾಚಲು ಅಲಂಕಾರಿಕ ಗೋಡೆಯನ್ನು ಹೇಗೆ ನಿರ್ಮಿಸಬೇಕು ಎಂಬುವುದನ್ನು ತಿಳಿಯುವ ಉದ್ದೇಶಕ್ಕಾಗಿ” ಎಂದು ಟ್ವೀಟ್‌ ಮಾಡುವ ಮೂಲಕ ಟಾಂಗ್‌ ಕೊಟ್ಟಿದ್ದಾರೆ. ಟ್ರಂಪ್‌ ಭಾರತ ಭೇಟಿ ಹಿನ್ನೆಲೆಯಲ್ಲಿ ಅಹಮದಾಬಾದ್‌ನ ರಸ್ತೆ ಬದಿಯಲ್ಲಿರುವ ಸ್ಲಮ್‌ಗಳು ಕಾಣದಂತೆ ಗೋಡೆ ನಿರ್ಮಾಣ ಮಾಡಲಾಗಿದೆ. ಅಷ್ಟೇ ಅಲ್ಲದೆ ಆ ಗೋಡೆಯಲ್ಲಿ ಚಿತ್ರಗಳನ್ನು ಬಿಡಿಸಿ ಅಲಂಕಾರ ಮಾಡಲಾಗಿದೆ. ಸ್ಲಂ ಮರೆಮಾಚಲು ಗೋಡೆ ಕಟ್ಟಿದ ನಡೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ದೇಶದ ನೈಜ ಸ್ಥಿತಿಯನ್ನು ಮರೆಮಾಚಲು ಗೋಡೆ ಕಟ್ಟಲಾಗುತ್ತಿದೆ ಎಂದು ಹಲವರು ವ್ಯಾಖ್ಯಾನ ಮಾಡಿದ್ದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರ ಭಾರತದ ಭೇಟಿ ವೇಳೆ ಅಹ್ಮದಾಬಾದ್ ನ ಸ್ಲಂಗಳು ಕಾಣದಂತೆ ಪ್ರಧಾನಿ ಮೋದಿ ಅವರು ಎತ್ತರದ ಗೋಡೆಗಳನ್ನು ಕಟ್ಟಿಸುತ್ತಿದ್ದಾರಂತೆ! ಆದರೆ ಅಧಃಪತನಕ್ಕೆ ಕುಸಿದಿರುವ ದೇಶದ ಆರ್ಥಿಕತೆ ಕಾಣಿಸದಂತೆ ಮೋದಿ ಅವರು ಯಾವ ಗೋಡೆ ಕಟ್ಟುತ್ತಾರೆ? ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದರು. ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಎರಡು ದಿನಗಳ ಭೇಟಿಗೆ ಭಾರತಕ್ಕೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಶಿಷ್ಟಾಚಾರ ಬದಿಗೊತ್ತಿ ಟ್ರಂಪ್ ಅವರನ್ನು ಸ್ವಾಗತಿಸಿದರು. ಗುಜರಾತ್‌ನ ಸಾಬರಮತಿ ಆಶ್ರಮಕ್ಕೆ ಟ್ರಂಪ್ ಭೇಟಿ ನೀಡಿದ್ದು ಬಳಿಕ ಮೊಟೆರಾ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲೂ ಟ್ರಂಪ್ ಭಾಗಿಯಾಗಲಿದ್ದಾರೆ.


from India & World News in Kannada | VK Polls https://ift.tt/39UOtdy

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...