ಬಸ್‌ ದರ ಹೆಚ್ಚಳ ಬಜೆಟ್‌ನಲ್ಲಿ ಬೆಲೆ ಏರಿಕೆಯ ಮುನ್ಸೂಚನೆ: ಎಚ್‌ಡಿ ಕುಮಾರಸ್ವಾಮಿ

ಬೆಂಗಳೂರು: ಏಕಾಏಕಿ ಬಸ್ ದರ ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರಿಗೆ ಹೊರೆ ಮಾಡಿರುವ ರಾಜ್ಯ ಸರಕಾರದ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ. ''ಈಗಾಗಲೇ ಬೆಲೆ ಏರಿಕೆಯಿಂದಾಗಿ ದೈನಂದಿನ ಜೀವನ ನಿರ್ವಾಹಣೆ ಮಾಡುವುದು ದುಸ್ತರವಾಗಿರುವಾಗಲೇ ಬಸ್ ದರ ಹೆಚ್ಚಳ ಮಾಡುವ ಅಗತ್ಯವಾದರೂ ಇತ್ತೇ?'' ಎಂದು ಪ್ರಶ್ನಿಸಿದ್ದಾರೆ. ''ಸಾರಿಗೆ ನಿಗಮಗಳು ನಷ್ಟದಲ್ಲಿರುವುದರಿಂದ ಸರಿದೂಗಿಸಲು ದರ ಹೆಚ್ಚಳ ಮಾಡಲಾಗಿದೆ ಎಂಬುದು ಸಮರ್ಥನಿಯ ಕಾರಣವಲ್ಲ. ಸಂಸ್ಥೆಗಳಲ್ಲಿ ಸೋರಿಕೆ ತಡೆಗಟ್ಟಲು ಸರ್ಕಾರ ಬಿಗಿ ಕ್ರಮ ತೆಗೆದುಕೊಳ್ಳಬೇಕು'' ಎಂದು ಕುಮಾರಸ್ವಾಮಿ ಸಲಹೆ ಮಾಡಿದ್ದಾರೆ. ''ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ನಾಲ್ಕು ನಿಗಮಗಳ ಬಸ್ ದರ ಹೆಚ್ಚಳ ಮಾಡಬೇಕೆಂಬ ಪ್ರಸ್ತಾವನೆ ಬಂದಿತ್ತು. ಆದರೆ, ಜನಸಾಮಾನ್ಯರಿಗೆ ಹೊರಯಾಗಬಾರದೆಂಬ ಕಾರಣಕ್ಕಾಗಿ ನಾನು ಇದಕ್ಕೆ ಅನುಮತಿ ನೀಡಿರಲಿಲ್ಲ. ಬಜೆಟ್ ಮಂಡನೆಗೂ ಮುನ್ನವೇ ಬಸ್ ದರ ಹೆಚ್ಚಳ ಮಾಡಿರುವುದನ್ನು ಗಮನಿಸಿದರೆ, ಈ ಬಾರಿ ಬಿಜೆಪಿ ಸರ್ಕಾರ ಅಯವ್ಯಯದಲ್ಲಿ ಬೆಲೆ ಏರಿಕೆ ಉಡುಗೊರೆ ನೀಡುವ ಮುನ್ಸೂಚನೆ ನೀಡಿದೆ'' ಎಂದು ಕುಮಾರಸ್ವಾಮಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯ ಸಾರಿಗೆ ಸಂಸ್ಥೆಗಳ ಬಸ್‌ ಪ್ರಯಾಣ ದರವನ್ನು ಶೇ.12ರಷ್ಟು ಹೆಚ್ಚಳ ಮಾಡಲಾಗಿದೆ. ಮಂಗಳವಾರ ಮಧ್ಯರಾತ್ರಿಯಿಂದಲೇ ದರ ಪರಿಷ್ಕರಣೆ ಜಾರಿಗೆ ಬಂದಿದೆ. ಬಿಎಂಟಿಸಿ ಹೊರತುಪಡಿಸಿ , ವಾಯವ್ಯ ಸಾರಿಗೆ ಹಾಗೂ ಈಶಾನ್ಯ ಸಾರಿಗೆ ಈ ಮೂರು ನಿಗಮಗಳ ಬಸ್‌ ಪ್ರಯಾಣ ದರವನ್ನು ಮಾತ್ರ ಹೆಚ್ಚಳ ಮಾಡಲಾಗಿದೆ. ವೋಲ್ವೊ ಬಸ್‌ ಪ್ರಯಾಣದ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.


from India & World News in Kannada | VK Polls https://ift.tt/2wLblxX

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...