ಸಂಪುಟ ಭಿನ್ನಮತ: ‘ಬೆಂಗಳೂರು, ಬೆಳಗಾವಿ ಕೇಂದ್ರಿತ ಸರ್ಕಾರ ಆಗದಿರಲಿ’ ಎಂದ ರೇಣುಕಾಚಾರ್ಯ

ಬೆಂಗಳೂರು: ದಿನಾಂಕ ಘೋಷಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಗೆದ್ದ ಶಾಸಕರ ಪೈಕಿ 10 ಮಂದಿಗೆ ಸಚಿವ ಸ್ಥಾನ ಖಚಿತವಾಗಿದ್ದು ಈ ನಡುವೆ ಮೂಲ ಶಾಸಕರು ಸಂಪುಟದಲ್ಲಿ ಸೇರ್ಪಡೆಗೊಳಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಸಂಪುಟದಲ್ಲಿ ಸ್ಥಾನ ಪಡೆದುಕೊಳ್ಳುವ ತಂತ್ರದ ಭಾಗವಾಗಿ ಶಾಸಕ ರೇಣುಕಾಚಾರ್ಯ ಸೇರಿದಂತೆ ಸಮಾನಮನಸ್ಕ ಶಾಸಕರು ಸಭೆ ನಡೆಸಿದ್ದು ಕಲ್ಯಾಣ ಕರ್ನಾಟಕ ಹಾಗೂ ಮಧ್ಯ ಕರ್ನಾಟಕಕ್ಕೆ ಸಚಿವ ಸ್ಥಾನ ನೀಡಿ ಎಂದು ಒತ್ತಡ ಹೇರಲು ಮುಂದಾಗಿದ್ದಾರೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ರೇಣುಕಾಚಾರ್ಯ, ಸಂಪುಟದಲ್ಲಿ ಪ್ರಾದೇಶಿಕ ಸಮತೋಲನ ಕಾಪಾಡಬೇಕು. ಸರಕಾರ ಕೇವಲ ಬೆಂಗಳೂರ ಹಾಗೂ ಬೆಳಗಾವಿ ಕೇಂದ್ರಿತವಾಗಿರಬಾರದು ಬದಲಾಗಿ ಕಲ್ಯಾಣ ಕರ್ನಾಟಕ ಹಾಗೂ ಮಧ್ಯ ಕರ್ನಾಟಕವನ್ನು ಪರಿಗಣಿಸಬೇಕು ಎಂದರು. ಸಂಪುಟ ವಿಸ್ತರಣೆಯಲ್ಲಿ ದಾವಣಗೆರೆ , ಚಿತ್ರದುರ್ಗ, ಕರಾವಳಿ, ರಾಯಚೂರು, ಗುಲ್ಬರ್ಗ ಹಾಗೂ ಯಾದರಿಗಿ ಪರಿಗಣಿಸಬೇಕು ಎಂಬುವುದು ನಮ್ಮ ಬೇಡಿಕೆಯಾಗಿದೆ. ಈ ವಿಚಾರವಾಗಿ ಈಗಾಗಲೇ ಸಿಎಂ ಜೊತೆಗೆ ಮಾತುಕತೆ ನಡೆಸಲಾಗಿದೆ ಮತ್ತೊಂದು ಬಾರಿ ಭೇಟಿಯಾಗಿ ಚರ್ಚೆ ನಡೆಸಲಾಗುವುದು ಎಂದರು. ಚುನಾವಣೆಯಲ್ಲಿ ಗೆದ್ದವರನ್ನು ಸಮಾಧಾನಗೊಳಿಸಬೇಕು. ಈ ನಿಟ್ಟಿನಲ್ಲಿ ಗೆದ್ದವರಿಗೆ ಅವಕಾಶ ನೀಡಲಿ ಆದರೆ ಸೋತವರಿಗೆ ಸಚಿವ ಸ್ಥಾನ ಕೊಟ್ಟರೆ ಸಮಸ್ಯೆಯಾಗುತ್ತದೆ ಎಂದ ರೇಣುಕಾಚಾರ್ಯ ಈ ವಿಚಾರವಾಗಿ ಸಿಎಂ ಹಾಗೂ ರಾಜ್ಯಾಧ್ಯಕ್ಷರ ಬಳಿ ಪ್ರಸ್ತಾಪ ಮಾಡುತ್ತೇವೆ ಎಂದಿದ್ದಾರೆ.


from India & World News in Kannada | VK Polls https://ift.tt/37TA0y7

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...