ಕಲಬುರಗಿ: ಐದು ವರ್ಷದ ಬಾಲಕಿಯನ್ನು ಪಕ್ಕದ ಕಾಂಪ್ಲೆಕ್ಸ್ ಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಯುವಕನೊಬ್ಬನಿಗೆ ಸ್ಥಳೀಯ ಜನರು ಧರ್ಮದೇಟು ನೀಡಿದ ಘಟನೆ ಇಲ್ಲಿನ ಗೋವಾ ಹೋಟೆಲ್ ಬಳಿ ನಡೆದಿದೆ. ಮಂಗಳವಾರ ಬೆಳಗ್ಗೆ ಬಾಲಕಿಯನ್ನು ಕರೆದೊಯ್ದ ಯುವಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸುತ್ತಿದ್ದಾಗ ಬಾಲಕಿ ಚೀರಾಡಿದ್ದಾಳೆ. ಇದರಿಂದ ಎಚ್ಚೆತ್ತುಕೊಂಡ ಸ್ಥಳೀಯರು ತಕ್ಷಣ ಕಟ್ಟಡದೊಳಗೆ ಓಡಿ ಹೋಗಿ ಬಾಲಕಿಯನ್ನು ರಕ್ಷಿಸಿದ್ದಲ್ಲದೆ ಕಿಡಿಗೇಡಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ, ಪ್ಯಾಂಟ್ ಬಿಚ್ಚಿ ಮನಸೋ ಇಚ್ಛೆ ಥಳಿಸಿದ್ದಾರೆ. ನಂತರ ಬ್ರಹ್ಮಪುರ ಪೊಲೀಸ್ ಠಾಣೆಗೆ ಕರೆ ಮಾಡಿ ಪೊಲೀರಿಗೆ ಒಪ್ಪಿಸಿದ್ದಾರೆ. ಯುವಕನ ಹೆಸರು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
from India & World News in Kannada | VK Polls https://ift.tt/2SVm8hF