ಊಟ ಸಿಗುತ್ತಿಲ್ಲವೇ ಈ ನಂಬರ್ ಗೆ ಕರೆಮಾಡಿ-155214

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ವೈರಾಣು 19 ( ) ಕುರಿತ ಅಧಿಕೃತ ಮಾಹಿತಿಗಾಗಿ ರೂಪಿಸಿರುವ ವೆಬ್‌ಸೈಟ್‌ ಹಾಗೂ ಬಡ ಕೂಲಿ ಕಾರ್ಮಿಕರ ಹಸಿವು ನೀಗಿಸಲು ಕಾರ್ಮಿಕ ಇಲಾಖೆ ಸ್ಥಾಪಿಸಿರುವ ಶುಲ್ಕ-ರಹಿತ ದೂರವಾಣಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್‌ ಅವರು ಚಾಲನೆ ನೀಡಿದರು. ವಾರ್ತಾ ಸೌಧದಲ್ಲಿ ಶನಿವಾರ ಸಚಿವರು, ಅಧಿಕೃತ ವೆಬ್‌ಸೈಟ್‌ ಹಾಗೂ ಕೂಲಿ ಹಾಗೂ ವಲಸೆ ಕಾರ್ಮಿಕರಿಗಾಗಿನ ಕಾರ್ಮಿಕ ಇಲಾಖೆಯ ಸಹಾಯವಾಣಿ- 155214 ಕರೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು. ವೆಬ್‌ಸೈಟ್‌ ವೈಶಿಷ್ಠ್ಯ: ಸಿಎಂ ಸಂದೇಶ, ಸಹಾಯವಾಣಿ ಮಾಹಿತಿ, ಮುನ್ನೆಚ್ಚರಿಕೆ ಕ್ರಮಗಳು, ಕೋವಿಡ್‌-19ರ ಮಾಹಿತಿ, 21 ದಿನಗಳ ಲಾಕ್‌ಡೌನ್‌ ವಿವರ, ಸ್ವಯಂಸೇವಕರಾಗುವವರಿಗೆ ಅವಕಾಶ ಇತ್ಯಾದಿ ಮಾಹಿತಿ ಈ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಸಹಾಯವಾಣಿಯ ವಿಶೇಷ ಕೂಲಿಕಾರರು ಸಹಾಯವಾಣಿಗೆ ಕರೆ ಮಾಡಿದಲ್ಲಿಅವರು ಎಲ್ಲಿಂದ ಕರೆ ಮಾಡಿದ್ದಾರೆ? ಎಂಬುದನ್ನು ದೃಢಪಡಿಸಿಕೊಂಡು ಸಮೀಪದ ಇಂದಿರಾ ಕ್ಯಾಂಟೀನ್‌ ಅಥವಾ ಸರಕಾರೇತರ ಸಂಘ-ಸಂಸ್ಥೆಗಳ ನೆರವಿನಿಂದ ಅವರು ಇದ್ದಲ್ಲೇ ಊಟದ ವ್ಯವಸ್ಥೆ ಮಾಡಲು ಸಹಾಯವಾಣಿ ನೆರವು ಒದಗಿಸಲಿದೆ. ಮುಖ್ಯಮಂತ್ರಿಯವರ ಇ-ಗವರ್ನೆನ್ಸ್‌ ಸಲಹೆಗಾರ ಬೇಳೂರು ಸುದರ್ಶನ, ಕಾರ್ಮಿಕ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರಕಾರದ ಕಾರ್ಯದರ್ಶಿ ಕ್ಯಾಪ್ಟನ್‌ ಪಿ. ಮಣಿವಣ್ಣನ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಎಸ್‌ ಎನ್‌ ಸಿದ್ದರಾಮಪ್ಪ ಅವರೂ ಈ ಸಂದರ್ಭದಲ್ಲಿ ಹಾಜರಿದ್ದರು. ಪ್ರೋ ಎಕ್ಟೀವ್ ನೆರವು: ದಕ್ಷಿಣ ಡಿಸಿಪಿ ವಿಭಾಗದ ಪೊಲೀಸರಿಂದ ವಲಸೆ ಹಾಗೂ ಕಟ್ಟಡ ಕಾರ್ಮಿಕರಿಗೆ ಪ್ರೋ ಎಕ್ಟೀವ್ ನೆರವು ನೀಡಲಾಗುತ್ತಿದೆ. ಕನಿಷ್ಠ ಸಾವಿರಕ್ಕೂ ಅಧಿಕ ಮಂದಿ ಇಲ್ಲಿ ನೆರವು ಪಡೆಯುತ್ತಿದ್ದಾರೆ. ಇಂದು ಬೆಳಗ್ಗೆ ಕಾರ್ಮಿಕರಿಗೆ ಪೊಲೀಸ್ ಇಲಾಖೆ ವತಿಯಿಂದ ಉಪಹಾರ ನೀಡಲಾಗಿದೆ.


from India & World News in Kannada | VK Polls https://ift.tt/39ryAuG

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...