ಕೊಡಗಿನ ವ್ಯಕ್ತಿಯಲ್ಲಿ ದೃಢಪಟ್ಟ ಸೋಂಕು, ರಾಜ್ಯದಲ್ಲಿ ಕೊರೊನಾ ಸಂಖ್ಯೆ 15ಕ್ಕೆ ಏರಿಕೆ

ಬೆಂಗಳೂರು: ಕೊಡಗಿನಲ್ಲಿ ವ್ಯಕ್ತಿಯೊಬ್ಬರಲ್ಲಿ ಕೋವಿಡ್‌ -19 ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ. ಸೌದಿ ಅರೆಬಿಯಾದ ಪ್ರವಾಸದಿಂದ ಹಿಂತಿರುಗಿದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಇರುವುದು ಅಧಿಕೃತಗೊಂಡಿದೆ. ಆರೋಗ್ಯ ಸಚಿವ ಶ್ರೀರಾಮುಲು ಈ ಕುರಿತಾಗಿ ಟ್ವೀಟ್‌ ಮಾಡಿದ್ದಾರೆ. ಸೋಂಕಿತ ವ್ಯಕ್ತಿಯನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿಟ್ಟು ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಇತ್ತೀಚೆಗೆ ಸೌದಿ ಪ್ರವಾಸಕ್ಕೆ ಈ ವ್ಯಕ್ತಿ ಹೋಗಿದ್ದರು. ಸೋಂಕು ಶಂಕೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರು. ಬುಧವಾರದ ವರೆಗೂ ರಾಜ್ಯದಲ್ಲಿ 14 ಪ್ರಕರಣಗಳು ಅಧಿಕೃತಗೊಂಡಿದ್ದವು. ಆದರೆ ಇದೀಗ ಮತ್ತೊಂದು ಪ್ರಕರಣ ಪತ್ತೆಯಾಗಿದ್ದು ಆಂಕ ಮೂಡಿಸಿದೆ. ಈ ವ್ಯಕ್ತಿಯ ಜೊತೆಗೆ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚಿ ಪ್ರತ್ಯೇಕಿಸಲು ಕೊಡಲು ಜಿಲ್ಲಾಡಳಿತ ನಿರ್ಧರಿಸಿದೆ.


from India & World News in Kannada | VK Polls https://ift.tt/33ssPvk

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...