ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 18 ಕ್ಕೆ ಏರಿಕೆ, ಮತ್ತೆ ಮೂರು ಪ್ರಕರಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಪೀಡಿತರ ಸಂಖ್ಯೆ ಶನಿವಾರ 18 ಕ್ಕೆ ಏರಿಕೆಯಾಗಿದೆ. ಮತ್ತೆ ಮೂರು ಹೊಸ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಒಟ್ಟು ಪೀಡಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಮೆಕ್ಕಾ ಪ್ರವಾಸದಿಂದ ಹಿಂತಿರುಗಿದ್ದ ಚಿಕ್ಕಬಳ್ಳಾಪುರದ ಗೌರಿಬಿದನೂರಿನ 32 ವರ್ಷದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕಿರುವುದು ಶನಿವಾರ ಬೆಳಿಗ್ಗೆ ದೃಢಪಟ್ಟಿತ್ತು. ಈ ಮೂಲಕ ಕೊರೊನಾ ಪೀಡಿತರ ಸಂಖ್ಯೆ 16ಕ್ಕೆ ಏರಿಕೆಯಾಗಿತ್ತು. ಇದೀಗ ಮತ್ತಿಬ್ಬರಿಗೆ ಕೊರೊನಾ ಇರುವುದು ದೃಢಪಟ್ಟಿದ್ದು ಶನಿವಾರ ಒಟ್ಟು ಮೂವರಿಗೆ ಕೋವಿಡ್‌ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಒಟ್ಟು ಸಂಖ್ಯೆ 18ಕ್ಕೆ ಏರಿಕೆಯಾಗಿದೆ.

ಇನ್ನು ರಾಜ್ಯದಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು 48 ಸರಕಾರಿ ಮತ್ತು 35 ಖಾಸಗಿ ಆಸ್ಪತ್ರೆಗಳನ್ನು ಗುರುತಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ದೇಶದಲ್ಲಿ 279 ಜನರಿಗೆ ಕೊರೊನಾ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 279ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚಿನ 63 ಪ್ರಕರಣಗಳು ದೃಢಪಟ್ಟಿದ್ದರೆ, ಕೇರಳದಲ್ಲಿ 40 ಜನರಿಗೆ 'ಕೋವಿಡ್‌-19' ಸೋಂಕು ಇರುವುದು ಖಚಿತಗೊಂಡಿದೆ. ಒಟ್ಟಾರೆ ದೇಶದಲ್ಲಿ ಕೊರೊನಾದಿಂದ 4 ಜನರು ಸಾವನ್ನಪ್ಪಿದ್ದಾರೆ. ಜಗತ್ತಿನಾದ್ಯಂತ ಕೊರೊನಾಗೆ 11,424 ಸಾವು ಜಗತ್ತಿನಾದ್ಯಂತ 2,77,049 ಜನರಿಗೆ ಕೊರೊನಾ ಸೋಂಕು ಇದೆ. ಇದರಲ್ಲಿ 11,424 ಜನರು ಸಾವಿಗೀಡಾಗಿದ್ದಾರೆ. ಚೀನಾಕ್ಕಿಂತ ಇಟಲಿಯಲ್ಲಿ ಅತೀ ಹೆಚ್ಚಿನ ಜನರು ಕೋವಿಡ್‌ 19 ಸೋಂಕಿನಿಂದ ಅಸುನೀಗಿದ್ದಾರೆ. ಇಟಲಿಯಲ್ಲಿ ಒಟ್ಟು 47,021 ಜನರಿಗೆ ಕೊರೊನಾ ಇದ್ದು, ದೇಶದಲ್ಲಿ 4,032 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇರಾನ್‌ನಲ್ಲಿ 1,433, ಸ್ಪೇನ್‌ನಲ್ಲಿ 1,093 ಜನರು ಕೊರೊನಾಗೆ ಬಲಿಯಾಗಿದ್ದಾರೆ.


from India & World News in Kannada | VK Polls https://ift.tt/2QAR9pI

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...