ನಿರ್ಭಯಾ ಹಂತಕರ ಗಲ್ಲಿಗೇರಿಸಿದ ಹ್ಯಾಂಗ್‌ಮನ್‌ಗೆ ₹1 ಲಕ್ಷ ದೇಣಿಗೆ ನೀಡಿದ ನಟ ಜಗ್ಗೇಶ್‌!

ಬೆಂಗಳೂರು: ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳನ್ನೂ ಶುಕ್ರವಾರ ಬೆಳಗ್ಗೆ 5:30ಕ್ಕೆ ಗಲ್ಲಿಗೇರಿಸಲಾಗಿದೆ. ಅಪರಾಧಿಗಳನ್ನು ಗಲ್ಲಿಗೇರಿಸಿದ ಹ್ಯಾಂಗ್‌ಮನ್‌ಗೆ ಕನ್ನಡದ ನಾಯಕ ನಟ, ನವರಸನಾಯಕ ಜಗ್ಗೇಶ್‌ ಅವರು 1 ಲಕ್ಷ ರೂಪಾಯಿ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ. ಕೊಟ್ಟ ಮಾತಿನಂತೆ 1 ಲಕ್ಷ ರೂ ನಿರ್ಭಯ ಹಂತಕರ ಹ್ಯಾಂಗ್‌ಮನ್‌ ಗೆ ನನ್ನ ಧೇಣಿಗೆ.. ದೇವನೊಬ್ಬನಿರುವ ಅವ ಎಲ್ಲ ನೋಡುತಿರುವ! ಸತ್ಯದ ಹಾದಿಯಲ್ಲಿ ನಡೆದವಗೆ ಭಯವಿಲ್ಲಾ! ಅಸತ್ಯದ ಮಾರ್ಗಕ್ಕೆ ಶಿಕ್ಷೆ ತಪ್ಪೊಲ್ಲಾ! ಈ ದಿನಕ್ಕೆ ಹಲ್ಲುಕಚ್ಚಿ, ಎಂದು ಅಂತ್ಯ ದುಷ್ಟ ಕ್ರಿಮಿಗಳಿಗೆ ಎಂದು ಕಾಯುತ್ತಿದ್ದೆ! ಸುದ್ಧಿ ಕೇಳಲು ನಿದ್ರೆಮಾಡದೆ ಕಾದೆ!ಹರಿಓಂ. ಶುಭದಿನ ಎಂದು ಟ್ವೀಟ್ಟರ್‌ನಲ್ಲಿ ತಿಳಿಸಿದ್ದಾರೆ. ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳನ್ನೂ ಶುಕ್ರವಾರ ಬೆಳಗ್ಗೆ 5:30ಕ್ಕೆ ಗಲ್ಲಿಗೇರಿಸಲಾಗಿದ್ದು, ಇಡೀ ದೇಶವೇ ಸಂಭ್ರಮಾಚರಣೆ ಮಾಡುತ್ತಿದೆ. ಕೊನೆಗೂ ನಿರ್ಭಯಾಳ ಆತ್ಮಕ್ಕೆ ಶಾಂತಿ ದೊರೆತಿದೆ. ದೇಶದ ಮಹಿಳಾ ಭದ್ರತೆಗೆ ಸಂಬಂಧಿಸಿದಂತೆ ಇದೊಂದು ಐತಿಹಾಸಿಕ ಹೆಜ್ಜೆ ಎಂಬುದಾಗ ನೆಟ್ಟಿಗರು ಬಣ್ಣಿಸುತ್ತಿದ್ದಾರೆ.


from India & World News in Kannada | VK Polls https://ift.tt/3bg073l

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...