ಕೊರೊನಾ ಭೀತಿಗೆ ಚಿತ್ರದುರ್ಗ ಸ್ತಬ್ಧ: ಮಾ.22ರವರೆಗೆ ನಿಷೇಧಾಜ್ಞೆ ಜಾರಿ!

ಕೊರೊನಾ: ಕೊರೊನಾ ವೈರಸ್‌ ಸೋಂಕು ಹಬ್ಬುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಮಾರ್ಚ್‌ 17ರಿಂದಲೇ ನಿಷೇಧಾಜ್ಞೆ ಜಾರಿಯಲ್ಲಿದ್ದು ಮಾರ್ಚ್‌ 22ರವರೆಗೆ ಮುಂದುವರಿಯಲಿದೆ. ಸಾರ್ವಜನಿಕರು ಹೆಚ್ಚಾಗಿ ಸೇರುವಂತಹ ಸಂತೆ, ಜಾತ್ರೆ, ಸಮಾವೇಶ, ಸಮ್ಮೇಳನ, ಮದುವೆ, ಕ್ರೀಡಾಕೂಟ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಕೊರೊನಾ ವೈರಸ್‌ ಸೋಂಕು ಹರಡುವ ಸಾಧ್ಯಗಳಿವೆ. ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್‌ ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ ಮಾರ್ಚ್‌ 22ರವರೆಗೆ ಜಿಲ್ಲೆಯಾದ್ಯಂತ ಮೇಲೆ ತಿಳಿಸಿರುವ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಅಲ್ಲದೆ, ಜಿಲ್ಲೆಯಾದ್ಯಂತ 5 ಜನಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಇದುವರೆಗೆ ಕರ್ನಾಟಕದಲ್ಲಿ 11 ಕೊರೊನಾ ಪ್ರಕರಣಗಳು ದೃಢವಾಗಿವೆ. ದೇಶದಲ್ಲಿ 147 ಪ್ರಕರಣಗಳು ಪತ್ತೆಯಾಗಿವೆ. ಜಮ್ಮು ಕಾಶ್ಮೀರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧನಿಗೆ ಕೊರೊನಾ ಸೋಂಕು ತಗುಲಿದ್ದು, ಸೈನಿಕರಲ್ಲಿ ಆತಂಕ ಮೂಡಿಸಿದೆ. ಬುಧವಾರ ಸೇನೆಯ ಮೂಲಗಳು ಸೋಂಕು ತಗುಲಿರುವ ಮಾಹಿತಿಯನ್ನು ಸ್ಪಷ್ಟಪಡಿಸಿವೆ.


from India & World News in Kannada | VK Polls https://ift.tt/2IU77qF

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...