ಚೀನಾದ ನಲ್ಲಿ ಮೊದಲು ಪತ್ತೆಯಾಗಿದ್ದ ಈಗ ವಿಶ್ವಾದ್ಯಂತ ಹರಡುತ್ತಿದೆ. 9000ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿದ್ದು, ಭಾರತ ಸೇರಿ ಒಟ್ಟು 150ರಾಷ್ಟ್ರಗಳಿಗೂ ಹೆಚ್ಚು ಕಡೆ ವೈರಸ್ ಹರಡಿದೆ. ಕರ್ನಾಟಕಕ್ಕೂ ಕಾಲಿಟ್ಟಿದೆ. ದೇಶದಲ್ಲಿ 4 ಸಾವಿನ ಪ್ರಕರಣ ದಾಖಲಾಗಿದೆ. ಭಾರತದಲ್ಲಿ 350 ಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಈ ಸಂಬಂಧ ಲೈವ್ ಮಾಹಿತಿ ವಿವರಣೆ ಇಲ್ಲಿದೆ. ಮಾರ್ಚ್ 23ರ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ:- ಕರ್ನಾಟಕ-15, ದೇಶ-360 ಸೋಂಕಿತ ಪ್ರಕರಣಗಳು. ದೇಶದಲ್ಲಿ 7 ಮಂದಿ ಬಲಿ. -ದೇಶದಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 360ಕ್ಕೆ ಏರಿಕೆಯಾಗಿದೆ. ಇದರಲ್ಲಿ 7 ಮಂದಿಯನ್ನು ಸೋಂಕು ಬಲಿ ಪಡೆದಿದೆ. ಸೋಂಕಿತ ಪ್ರಕರಣಗಳಲ್ಲಿ ಒಟ್ಟು 24 ಮಂದಿ ಚೇತರಿಸಿಕೊಂಡಿದ್ದಾರೆ. -ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ 3 ಲಕ್ಷಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಸಂಖ್ಯೆ 13 ಸಾವಿರಕ್ಕೂ ಹೆಚ್ಚು ಎಂದು ವರದಿ ತಿಳಿಸಿದೆ.
from India & World News in Kannada | VK Polls https://ift.tt/33P3v33