ಕೊರೊನಾ ಸೋಂಕಿಗೆ ದೇಶದಲ್ಲಿ 5ನೇ ಬಲಿ: ಮಹಾರಾಷ್ಟ್ರದಲ್ಲಿ ಎರಡನೇ ಸಾವು!

ಹೊಸದಿಲ್ಲಿ: ಮಾರಕ ಕೊರೋನಾ ವೈರಸ್ ಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ದೇಶದಲ್ಲಿ ಇದುವರೆಗೆ ಕೊರೊನಾ ವೈರಸ್‌ನಿಂದ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಸುಮಾರು 63 ವರ್ಷದ ವೃದ್ಧ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಸೋಂಕಿಗೆ ಇಬ್ಬರು ಬಲಿಯಾದಂತಾಗಿದೆ. ಈ ವ್ಯಕ್ತಿ ಡಯಾಬಿಟೀಸ್‌, ಅಧಿಕ ರಕ್ತದೊತ್ತಡ ಹಾಗೂ ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದರು. ವಿಶ್ವವನ್ನು ಕಾಡುತ್ತಿರುವ ಕೊರೊನಾ ವೈರಸ್‌ ಮಹಾಮಾರಿ ನಿಯಂತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಮಾರ್ಚ್‌ ಇಂದು ಭಾನುವಾರ (ಮಾ.22) ಜನತಾ ಕರ್ಫ್ಯೂಗೆ ಕರೆ ನೀಡಿದ್ದರು. ಒಂದು ದಿನ ಜನಸಂಪರ್ಕ ತಡೆಯುವ ಮೂಲಕ ವೈರಸ್‌ ಹರಡುವಿಕೆ ತಡೆಯುವುದು ಜನತಾ ಕರ್ಫ್ಯೂ ಉದ್ದೇಶವಾಗಿದ್ದು, ಪ್ರಧಾನ ಮಂತ್ರಿಯ ಕರೆಗೆ ಇಡೀ ದೇಶವೇ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ರಾಜ್ಯದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಕೊರೋನಾ ಶಂಕಿತರನ್ನು ಆಸ್ಪತ್ರೆಯಲ್ಲಿರಿಸಿ ನಿಗಾ ವಹಿಸಲು ಸಾಧ್ಯವಾಗದ ಕಾರಣ ಅವರನ್ನು ಮನೆಯಲ್ಲೇ ಇರಿಸಿ, 14 ದಿನಗಳ ಕಾಲ ಪ್ರತ್ಯೇಕವಾಗಿರಲು ಸೂಚಿಸಲಾಗಿದೆ. ಮನೆಯಲ್ಲೇ ಸ್ವನಿರ್ಬಂಧಕ್ಕೆ ಆದೇಶಿಸಲಾಗಿರುವ ಕೊರೋನಾ ಶಂಕಿತರ ಕೈ ಮೇಲೆ ಕ್ವಾರಂಟೈನ್ ಸ್ಟಾಂಪ್ ಹಾಕಲು ಸರ್ಕಾರ ಆದೇಶ ಹೊರಡಿಸಿದೆ. ಇದುವರೆಗೆ ಬಲಿಯಾದವರ ಮಾಹಿತಿ
  • ದೆಹಲಿ- 1
  • ಕರ್ನಾಟಕ-1
  • ಮಹಾರಾಷ್ಟ್ರ- 2
  • ಪಂಜಾಬ್‌ - 1


from India & World News in Kannada | VK Polls https://ift.tt/2QBCjPT

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...