ಕೊರೊನಾಗೆ ಮತ್ತೋರ್ವ ಬಲಿ: ದೇಶಾದ್ಯಂತ 6ಕ್ಕೇರಿದ ಸಾವಿನ ಸಂಖ್ಯೆ!

ಪಾಟ್ನಾ: ಕೊರೊನಾ ವಿರುದ್ಧದ ಹೋರಾಟದ ಭಾಗವಾಗಿ ಇಂದು ಇಡೀ ದೇಶ ಜನತಾ ಕರ್ಫ್ಯೂ ಆಚರಿಸುತ್ತಿದೆ. ಪ್ರಧಾನಿ ಮೋದಿ ಕೊಟ್ಟ ಕರೆಗೆ ಜನ ಒಕ್ಕೊರಲಿನ ಬೆಂಬಲ ಘೋಷಿಸಿದ್ದಾರೆ. ಆದರೆ ದೇಶದಲ್ಲಿ ಕೊರೊನಾ ಪೀಡಿತರ ಸಾವಿನ ಸಂಖ್ಯೆಯೂ ಹೆಚ್ವಾಗುತ್ತಿದ್ದು, ಇಂದು ಬಿಹಾರದಲ್ಲಿ ಮತ್ತೋರ್ವ ನಾಗರಿಕ ಮಾರಕ ವೈರಾಣುವಿಗೆ ಬಲಿಯಾಗಿದ್ದಾನೆ. ಈ ಮೂಲಕ ದೇಶದಲ್ಕಿ ಕೊರೊನಾ ಪೀಡಿತರ ಸಾವಿನ ಸಂಖ್ಯೆ 6ಕ್ಕೇರಿದೆ. ಇತ್ತಿಚೀಗೆ ಕತಾರ್‌ಗೆ ಭೇಟಿ ನೀಡಿದ್ದ ಬಿಹಾರದ 38 ವರ್ಷದ ವ್ಯಕ್ತಿಯನ್ನು ಪರೀಕ್ಷೆ ಮಾಡಿದಾಗ ಕೊರೊನಾ ಪಾಸಿಟಿವ್ ಫಲಿತಾಂಶ ಬಂದಿತ್ತು. ಕೂಡಲೇ ಆತನನ್ನು ಪಾಟ್ನಾದ ಏಮ್ಸ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿರುವುದರಿಂದ ದೇಶದಲ್ಲಿ ಕೊರೊನಾ ಪೀಡಿತರ ಸಾವಿನ ಸಂಖ್ಯೆ 6ಕ್ಕೇರಿದಂತಾಗಿದೆ. ಇಂದು ಮಹಾರಾಷ್ಟ್ರದಲ್ಲಿ 63ವರ್ಷದ ವೃದ್ಧನೋರ್ವ ಕೊರೊನಾ ವೈರಸ್‌ಗೆ ಬಲಿಯಾಗಿದ್ದ. ಒಟ್ಟಿನಲ್ಲಿ ದೇಶದಲ್ಲಿ ಕೊರೊನಾ ವೈರಸ್ ತನ್ನ ಮರಣ ಮೃದಂಗವನ್ನು ಮುಂದುವರೆಸಿದ್ದು, ಸಾವಿನ ಸಂಖ್ಯೆ ಏರುತ್ತಿರುವುದು ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.


from India & World News in Kannada | VK Polls https://ift.tt/2U936F3

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...