ಕೊರೊನಾ ವೈರಸ್ ಲೈವ್ ಅಪ್ಡೇಟ್ಸ್: ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ

ಚೀನಾದ ನಲ್ಲಿ ಮೊದಲು ಪತ್ತೆಯಾಗಿದ್ದ ಈಗ ವಿಶ್ವಾದ್ಯಂತ ಹರಡುತ್ತಿದೆ. 8000ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿದ್ದು, ಭಾರತ ಸೇರಿ ಒಟ್ಟು 145ರಾಷ್ಟ್ರಗಳಿಗೂ ಹೆಚ್ಚು ಕಡೆ ವೈರಸ್ ಹರಡಿದೆ. ಕರ್ನಾಟಕಕ್ಕೂ ಕಾಲಿಟ್ಟಿದೆ. ದೇಶದಲ್ಲಿ 3 ಸಾವಿನ ಪ್ರಕರಣ ದಾಖಲಾಗಿದೆ. ಭಾರತದಲ್ಲಿ 150 ಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಈ ಸಂಬಂಧ ಲೈವ್ ಮಾಹಿತಿ ವಿವರಣೆ ಇಲ್ಲಿದೆ. ಮಾರ್ಚ್ 19ರ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ:- -ಕರ್ನಾಟಕದಲ್ಲಿ 14, ದೇಶದಲ್ಲಿ 151 ಪ್ರಕರಣಗಳು ಬೆಳಕಿಗೆ -ದೇಶದಲ್ಲಿ ವೈರಸ್ ಹಬ್ಬುತ್ತಿರುವ ಹಿನ್ನೆಲೆ ಗುರುವಾರ ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. -ಜಗತ್ತಿನಾದ್ಯಂತ 8000 ಮಂದಿಯನ್ನು ಬಲಿ ಪಡೆದುಕೊಂಡಿದೆ. ಭಾರತದಲ್ಲಿ 3ಮಂದಿ ಸಾವನ್ನಪ್ಪಿದ್ದಾರೆ. ಇಟಲಿಯಲ್ಲಿ ಮೃತರ ಸಂಖ್ಯೆ 2,500ಕ್ಕೆ ಮುಟ್ಟಿದೆ ಜೊತೆಗೆ 27, 900 ಸೋಂಕಿತ ಪ್ರಕರಣಗಳ ಸಂಖ್ಯೆ ಬೆಳಕಿಗೆ ಬಂದಿದೆ. -ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ 2 ಲಕ್ಷಕ್ಕೆ ಏರಿಕೆಯಾಗಿದೆ. ಚೀನಾದಲ್ಲಿ ಈವರೆಗೆ 80,800 ಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳ ಪತ್ತೆಯಾಗಿವೆ. -ಕೊರೊನಾವೈರಸ್ ಹಿನ್ನೆಲೆಯಲ್ಲಿ ಈ ತಿಂಗಳ ಮಾರ್ಚ್‌ನಲ್ಲಿ ಶೇ 60 ಕ್ಕೂ ಹೆಚ್ಚು ರೈಲು ಟಿಕೆಟ್‌ಗಳನ್ನು ರದ್ದುಪಡಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ಸಂಸದೀಯ ಸಮಿತಿಗೆ ಮಾಹಿತಿ ನೀಡಿದ್ದಾರೆ. -ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಯಲು 200 ಕೋಟಿ ರೂ.ಗಳನ್ನು ಮೀಸಲಿಡಲು ಕರ್ನಾಟಕ ಸಚಿವ ಸಂಪುಟ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸದನದಲ್ಲಿ ಬುಧವಾರ ಹೇಳಿಕೆ ನೀಡಿದ್ದಾರೆ.


from India & World News in Kannada | VK Polls https://ift.tt/3dlJQMq

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...