ಕೊರೊನಾ ಅಟ್ಟಹಾಸ: ಮಂಗಳವಾರ ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ

ಹೊಸದಿಲ್ಲಿ: ಕೊರೊನಾ ಸೋಂಕು ದೇಶದಲ್ಲಿ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆ ಮಂಗಳವಾರ ರಾತ್ರಿ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಭಾನುವಾರ ಜನತಾ ಕರ್ಫ್ಯೂ ಘೋಷಿಸಿದ್ದ ಪ್ರಧಾನಿ, ಮಂಗಳವಾರ ದೇಶದ ಜನರಲ್ಲಿ ಮತ್ತೆ ಏನು ಮನವಿ ಮಾಡಿಕೊಳ್ಳಲಿದ್ದಾರೆ, ಯಾವ ಘೋಷಣೆಗಳನ್ನು ಮಾಡಲಿದ್ದಾರೆ. ಭಾರತದಾದ್ಯಂತ ಲಾಕ್‌ಡೌನ್‌ ಅನ್ನು ಮತ್ತಷ್ಟು ಬಿಗಿ ಮಾಡಲಿದ್ದಾರಾ ಎಂಬುದು ಕುತೂಹಲ ಕೆರಳಿಸಿದೆ. ಮಾರ್ಚ್ 24, 2020ರಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದೇನೆ ಎಂದು ಸ್ವತ: ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ. ಕೋವಿಡ್‌ - 19 ಅಟ್ಟಹಾಸ ಸಂಬಂಧ ಹಲವು ಮಹತ್ವದ ವಿಚಾರಗಳನ್ನು ಹಂಚಿಕೊಳ್ಳುವುದಾಗಿ ಮೋದಿ ಟ್ವೀಟ್‌ ಮಾಡಿದ್ದಾರೆ. ಕಳೆದ ವಾರ ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದ ಪ್ರಧಾನಿ ಮೋದಿ ಒಂದು ದಿನದ ಕಾಲ ಜನತಾ ಕರ್ಫ್ಯೂ ಮಾಡಿ ಎಂದು ದೇಶದ ಜನತೆಗೆ ಮನವಿ ಮಾಡಿಕೊಂಡಿದ್ದರು. ಇದಕ್ಕೆ ನಮ್ಮ ಜನ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಈ ಹಿನ್ನೆಲೆ ಪ್ರಧಾನಿ ಮೋದಿ ಮಾರ್ಚ್ 24, 2020ರಂದು ಮತ್ತೆ ಯಾವ ಹೊಸ ಘೋಷಣೆ ಮಾಡಲಿದ್ದಾರೆ ಎನ್ನುವುದನ್ನು ಕಾದುನೋಡಬೇಕಾಗಿದೆ.


from India & World News in Kannada | VK Polls https://ift.tt/33ID5Qs

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...