
ಹೊಸದಲ್ಲಿ: ಭಾರತೀಯ ಕ್ರಿಕೆಟ್ ತಂಡದ ರಿಸ್ಟ್ ಸ್ಪಿನ್ನರ್ , ಸದ್ಯ ಮನೆಯಲ್ಲೇ ಕಾಲ ಕಳೆಯುತ್ತಿದ್ದಾರೆ. ನಿಮಗೆಲ್ಲರಿಗೂ ತಿಳಿದಿರುವಂತೆಯೇ ಇಡೀ ದೇಶವೇ ವಿರುದ್ಧ ಹೋರಾಡುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ 21 ದಿನಗಳ ಲಾಕ್‌ಡೌನ್ ಘೋಷಣೆ ಮಾಡಿದ್ದಾರೆ. ದೇಶದೆಲ್ಲ ಕ್ರೀಡಾ ಚಟುವಟಿಕೆಗಳು ರದ್ದುಗೊಂಡಿದೆ. ಕೋವಿಡ್ 19 ಸೋಂಕು ಹರಡುವುದನ್ನು ಮಟ್ಟ ಹಾಕಲು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಮನವಿ ಮಾಡಲಾಗಿದೆ. ಇದಕ್ಕಾಗಿ ಏಪ್ರಿಲ್ 14ರ ವರೆಗೆ ದೇಶದ ಪ್ರಜೆಗಳಲ್ಲಿ ಮನೆಯಲ್ಲೇ ಇರುವಂತೆಯೇ ಸೂಚಿಸಲಾಗಿದೆ. ಭಾರತೀಯ ಕ್ರಿಕೆಟಿಗ ಯುಜ್ವೇಂದ್ರ ಚಹಲ್ ತಮ್ಮ ಕುಟುಂಬದೊಂದಿಗೆ ಮನೆಯಲ್ಲೇ ಉಳಿದುಕೊಂಡಿದ್ದಾರೆ. ಸದ್ಯ ತಯಾಷೆಯ ವಿಡಿಯೋ ತಾಣ ಟಿಕ್ ಟಾಕ್‌ನಲ್ಲಿ ಬ್ಯುಸಿಯಾಗಿರುವ ಚಹಲ್, ತಮ್ಮ ಅಪ್ಪನ ಜೊತೆಗೆ ವಿಡಿಯೋ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಇದೇ ಮೊದಲ ಬಾರಿಗೆ ಚಹಲ್ ಅಪ್ಪ ಕೂಡಾ ಮಗನೊಂದಿಗೆ ಟಿಕ್ ಟಾಕ್ ವಿಡಿಯೋದಲ್ಲಿ ಸಾಥ್ ನೀಡಿದ್ದಾರೆ. ಪ್ರಸ್ತುತ ವಿಡಿಯೋ ವೈರಲ್ ಆಗುತ್ತಿದೆ. ಈ ಮೊದಲು ಕ್ವಾರಂಟೈನ್ ಸಮಯದಲ್ಲಿ ಜನರು ಮನೆಯಲ್ಲೇ ಸುರಕ್ಷಿತರಾಗಿರುವಂತೆಯೇ ಯುಜ್ವೇಂದ್ರ ಚಹಲ್ ಕರೆ ನೀಡಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ತಲ್ಲೀನವಾಗಿರುವ ಯುಜ್ವೇಂದ್ರ ಚಹಲ್ ಅಭಿಮಾನಿಗಳಲ್ಲಿ ಹೆಚ್ಚಿನ ಆಕರ್ಷಣೆಗೆ ಪಾತ್ರವಾಗಿದ್ದಾರೆ. ಇತ್ತೀಚೆಗಷ್ಟೇ ಯುವತಿ ಜೊತೆಗೆ ಟಿಕ್ ಟಾಕ್ ವಿಡಿಯೋ ಮಾಡುವ ಮೂಲಕ ಗಮನ ಸೆಳೆದಿದ್ದರು. ತದಾ ಬಳಿಕ ತಮ್ಮ ಸಾಕುನಾಯಿ ಮೇಲಿನ ಪ್ರೀತಿಯನ್ನು ವಿಡಿಯೋ ಮೂಲಕ ಹಂಚಿದ್ದರು. ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸುತ್ತಿರುವ ಚಹಲ್, ಪ್ರಮುಖ ಅಸ್ತ್ರವಾಗಿದ್ದಾರೆ. ಅಂದ ಹಾಗೆ ಐಪಿಎಲ್ 2020 ಟೂರ್ನಿಯನ್ನು ಏಪ್ರಿಲ್ 15ರ ವರೆಗೆ ಅಮಾನತಿನಲ್ಲಿಡಲಾಗಿದೆ. ವೈದ್ಯಕೀಯ ತುರ್ತು ಪರಿಸ್ಥಿತಿ ಸುಧಾರಿಸದಿದ್ದಲ್ಲಿ ಈ ಬಾರಿ ಟೂರ್ನಿ ಆಯೋಜನೆಯಾಗುವುದೇ ಅನುಮಾನವೆನಿಸಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿಯ ಪ್ರಕಾರ ದೇಶದಲ್ಲಿ ಒಟ್ಟು 649 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಈ ಪೈಕಿ 42 ಮಂದಿ ಚೇತರಿಕೆ ಕಂಡಿರುವುದು ಉತ್ತಮವಾದ ಬೆಳವಣಿಗೆಯಾಗಿದೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2JiW8XX