ಕೊರೊನಾ ವೈರಸ್‌: ಕೊನೆಗೂ ಸರ್ವ ಪಕ್ಷ ಸಭೆ ಕರೆದ ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಕರೆಯುವಂತೆ ಪ್ರತಿಪಕ್ಷಗಳು ಸರಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದವು. ಇದೀಗ ಕೊನೆಗೂ ಮುಖ್ಯಮಂತ್ರಿ ಸರ್ವಪಕ್ಷ ಸಭೆ ಕರೆದಿದ್ದಾರೆ. ಕೋವಿಡ್‌-19 ನಿಯಂತ್ರಣಕ್ಕಾಗಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಮಾರ್ಚ್‌ 19 ಭಾನುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಯಡಿಯೂರಪ್ಪ ಈ ಸಭೆ ಕರೆದಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ವ ಪಕ್ಷ ಸಭೆ ಕರೆಯುವಂತೆ ಒತ್ತಾಯಿಸಿದ್ದರು. “ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ಹೀಗಾಗಿ ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಆದರೆ ಇಲ್ಲಿಯವರೆಗೆ ಸರ್ವ ಪಕ್ಷ ಸಭೆ ಕರೆದಿಲ್ಲ. ಕೊರೊನಾ ವಿಚಾರದಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ,” ಎಂದು ಡಿಕೆ ಶಿವಕುಮಾರ್‌ ಹೇಳಿದ್ದರು.

ಇಲ್ಲಿಯವರೆಗೆ ಕರ್ನಾಟಕದಲ್ಲಿ 74ಕ್ಕೂ ಹೆಚ್ಚು ಕೊರೊನಾ ವೈರಸ್‌ ಪ್ರಕರಣಗಳು ವರದಿಯಾಗಿವೆ. ದಿನದಿಂದ ದಿನಕ್ಕೆ ಸೋಂಕು ಪೀಡಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ.


from India & World News in Kannada | VK Polls https://ift.tt/2QU7NAR

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...