ಮುಸ್ಲಿಮೇತರ ವಿದ್ಯಾರ್ಥಿಗಳನ್ನು ಫೇಲ್ ಮಾಡಿದ್ದೇನೆ ಎಂದ ಜಾಮಿಯಾ ಪ್ರೋಫೆಸರ್ ಸಸ್ಪೆಂಡ್!

ನವದೆಹಲಿ: ಶಿಕ್ಷಣ ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಧರ್ಮ ತೂರಿಕೊಂಡರೆ ಅಪಾಯ ಕಟ್ಟಿಟ್ಟ ಬುತ್ತಿ. ಆದರೆ ರಾಷ್ಟ್ರ ರಾಜಧಾನಿ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದ ಪ್ರೋಫೆಸರ್‌ವೋರ್ವ ತನ್ನ ವಿದ್ಯಾರ್ಥಿಗಳಲ್ಲಿ ಧರ್ಮ ಹಡುಕಿ ಸಸ್ಪೆಂಡ್ ಆಗಿದ್ದಾರೆ. ಪರೀಕ್ಷೆಯಲ್ಲಿ 15 ಮುಸ್ಲಿಮೇತರ ವಿದ್ಯಾರ್ಥಿಗಳನ್ನು ಫೇಲ್ ಮಾಡಿರುವುದಾಗಿ ಹೇಳಿ ಟ್ವೀಟ್ ಮಾಡಿದ್ದ ವಿವಿ ಪ್ರೋಫೆಸರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಪರೀಕ್ಷೆಗೆ ಕುಳಿತಿದ್ದ 55 ವಿದ್ಯಾರ್ಥಿಗಳ ಪೈಕಿ 15 ಮುಸ್ಲಿಮೇತರ ವಿದ್ಯಾರ್ಥಿಗಳನ್ನು ಫೇಲ್ ಮಾಡಿರುವುದಾಗಿ ಡಾ. ಅಬ್ರಾರ್ ಅಹ್ಮದ್ ಟ್ವೀಟ್ ಮಾಡಿದ್ದರು. ಈ ಟ್ವೀಟ್‌ಗೆ ಭಾರೀ ವಿರೋಧ ವ್ಯಕ್ತವಾದ ಕಾರಣ ಕೂಡಲೇ ಡಾ. ಅಬ್ರಾರ್ ತಮ್ಮ ಟ್ವೀಟ್‌ನ್ನು ಡಿಲೀಟ್ ಮಾಡಿದ್ದಾರೆ. ಆದರೆ ಡಾ. ಅಬ್ರಾರ್ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿವಿ ಆಡಳಿತ ಮಂಡಳಿ, ವಿದ್ಯಾರ್ಥಿಗಳನ್ನು ಧರ್ಮದ ಆಧಾರದ ಮೇಲೆ ಪರಿಗಣನೆಗೆ ತೆಗೆದುಕೊಂಡ ಆರೋಪದಲ್ಲಿ ಅಬ್ರಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿದೆ. ಧರ್ಮದ ಆಧಾರದ ಮೇಲೆ ವಿದ್ಯಾರ್ಥಿಗಳಲ್ಲಿ ತಾರತಮ್ಯ ಮಾಡುವುದನ್ನು ಸಹಿಸುವುದಿಲ್ಲ ಎಂದು ವಿಶ್ವವಿದ್ಯಾಲಯ ಸ್ಪಷ್ಟಪಡಿಸಿದ್ದು, ಡಾ. ಅಬ್ರಾರ್ ಅಹ್ಮದ್ ಅವರನ್ನು ಸೇವೆಯಿಂದ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದೆ. ಈ ಮಧ್ಯೆ ತಮ್ಮ ಟ್ವೀಟ್‌ಗೆ ಸಮಜಾಯಿಷಿ ನೀಡಿರುವ ಡಾ. ಅಬ್ರಾರ್, ನನ್ನ ಸಿಎಎ ವಿರೋಧಿ ನಿಲುವಿಗೆ ಬೆಂಬಲಿಸುವ ವಿದ್ಯಾರ್ಥಿಗಳ ಸಂಖ್ಯೆ ಏರಿದೆ ಎಂದಷ್ಟೇ ನಾನು ಹೇಳಿದ್ದೇನೆಯೇ ಹೊರತು ಮುಸ್ಲಿಮೇತರ ವಿದ್ಯಾರ್ಥಿಗಳನ್ನು ಫೇಲ್ ಮಾಡಿದ್ದೇನೆ ಎಂದು ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೂ ವಿದ್ಯಾರ್ಥಿಗಳನ್ನು ಮುಸ್ಲಿಂ ಹಾಗೂ ಮುಸ್ಲಿಮೇತರ ಎಂದು ಗುರುತಿಸುವುದೇ ಅಪರಾಧ ಎಂದು ಡಾ. ಅಬ್ರಾರ್ ನಡೆಗೆ ಎಲ್ಲರೂ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಕುರಿತು ಆಂತರಿಕ ತನಿಖೆಗೂ ವಿವಿ ಆಡಳಿತ ಮಂಡಳಿ ಆದೇಶ ನೀಡಿದೆ.


from India & World News in Kannada | VK Polls https://ift.tt/39nqiUL

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...