
ಹೊಸದಿಲ್ಲಿ: ಜಾಗತಿಕ ಪಿಡುಗಾಗಿ ವ್ಯಾಪಿಸಿರುವ ಬಗ್ಗೆ ಪ್ರಧಾನಿ ಅವರು ಗುರುವಾರ ಅಬುಧಾಬಿಯ ರಾಜ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ಜೊತೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆ. ಉಭಯ ನಾಯಕರು ಕೋವಿಡ್-19 ವ್ಯಾಪಕತೆ ಮತ್ತು ರಾಷ್ಟ್ರದಲ್ಲಿ ಪರಿಸ್ಥಿತಿ ಬಗ್ಗೆ ಪರಸ್ಪರ ಮಾಹಿತಿ ಹಂಚಿಕೊಂಡರು. ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ಯಾವ್ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂಬ ವಿಚಾರವಾಗಿ ಚರ್ಚೆ ನಡೆಸಿದರು. ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುಂದಿನ ಕೆಲವು ವಾರಗಳು ಅತ್ಯಂತ ನಿರ್ಣಾಯಕವಾಗಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲ ರಾಷ್ಟ್ರಗಳ ಸಹಕಾರದೊಂದಿಗೆ ಕೋವಿಡ್ ಸೋಂಕನ್ನು ನಿಯಂತ್ರಿಸುವ ನಿರ್ಣಯವನ್ನು ಉಭಯ ರಾಷ್ಟ್ರಗಳ ನಾಯಕರು ತೆಗೆದುಕೊಂಡರು. ಜಿ20 ಶೃಂಗದಲ್ಲಿ ಕೊರೊನಾ ಸೋಂಕಿನ ವಿಚಾರವಾಗಿ ಪ್ರಸ್ತಾಪಿಸಿ ಜಾಗತಿಕ ನಿರ್ಣಯ ಕೈಗೊಳ್ಳುವ ಬಗ್ಗೆಯೂ ಚರ್ಚಿಸಿದರು. ಯುಎಇನಲ್ಲಿ ನೆಲೆಸಿರುವ 20 ಲಕ್ಷಕ್ಕೂ ಹೆಚ್ಚು ಭಾರತೀಯರ ಯೋಗಕ್ಷೇಮವನ್ನು ನೋಡಿಕೊಳ್ಳುವುದಾಗಿ ಅಬುಧಾಬಿಯ ರಾಜ ಭರವಸೆ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಯುಎಇ ಜನರಿಗೆ ಮತ್ತು ರಾಜ ಕುಟುಂಬಕ್ಕೆ ಶುಭವಾಗಲಿ ಎಂದು ಹಾರೈಸಿದರು.
from India & World News in Kannada | VK Polls https://ift.tt/2ydrFbB