ನವದೆಹಲಿ: ರಾಜ್ಯಸಭೆಗೆ ನಡೆಯಬೇಕಿದ್ದ ಚುನಾವಣೆಯನ್ನು ಕೊರೊನಾ ವೈರೆಸ್ ಭೀತಿಯ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಸ್ಪಷ್ಟಪಡಿಸಿದೆ. ಇದೇ ಗರುವಾರ(ಮಾ.26)ರಂದು ರಾಜ್ಯಸಭೆಗೆ ಚುನಾವಣೆ ನಡೆಯಬೇಕಿತ್ತು. ಆದರೆ ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಮಾ.31ರ ಬಳಿಕ ಘೋಷಿಸಲಾಗುವುದು ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ವೇಳೆ ಅಭ್ಯರ್ಥಿಗಳು, ಅಭ್ಯರ್ಥಿಗಳ ಏಜೆಂಟರು, ಚುನಾವಣಾ ಅಧಿಕಾರಿಗಳು ಹಾಗೂ ಶಾಸಕರು ಒಂದೆಡೆ ಸೇರಬೇಕಾಗುತ್ತದೆ. ಕೊರೊನಾ ವೈರಸ್ ಹರಡುತ್ತಿರುವ ಈ ಕಠಿಣ ಸಂದರ್ಭದಲ್ಲಿ ಎಲ್ಲರನ್ನೂ ಒಂದು ಕಡೆ ಸೇರಿಸುವುದು ಉಚಿತವಲ್ಲ. ಈ ಕಾರಣಕ್ಕೆ ಚುನಾವಣೆಯನ್ನೇ ಮುಂದೂಡಿರುವುದಾಗಿ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಹೀಗಾಗಿ ದೇಶದ ವಿವಿಧ ರಾಜ್ಯಗಳ ಒಟ್ಟು 18 ರಾಜ್ಯಸಭಾ ಸ್ಥಾನಗಳಿಗೆ ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಲಾಗಿದ್ದು, ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿ ರಾಜ್ಯಸಭೆ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದ ಮಧ್ಯಪ್ರದೇಶದ ಜ್ಯೋತಿರಾದಿತ್ಯ ಸಿಂಧಿಯಾ ಮತ್ತಷ್ಟು ದಿನಗಳ ಕಾಲ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯಸಭೆ ಚುನಾವಣೆಯ ರಾಜ್ಯವಾರು ಪಟ್ಟಿ: ಗುಜರಾತ್-04 ಆಂಧ್ರಪ್ರದೇಶ-04 ಮಧ್ಯಪ್ರದೇಶ-03 ರಾಜಸ್ಥಾನ-03 ಜಾರ್ಖಂಡ್-02 ಮಣಿಪುರ್-02 ಮೇಘಾಲಯ-01 ಒಟ್ಟು 17 ರಾಜ್ಯಗಳ 55 ರಾಜ್ಯಸಭಾ ಸೀಟುಗಳಿಗೆ ಚುನಾವಣೆ ನಡೆಯಬೇಕಿತ್ತು. ಆದರೆ ಇವುಗಳ ಪೈಕಿ 37 ಸೀಟುಗಳಿಗೆ ಅವಿರೋಧ ಆಯ್ಕೆ ನಡೆದಿರುವುದರಿಂದ ಉಳಿದ 18 ಸೀಟುಗಳಿಗೆ ಮಾತ್ರ ಚುನಾವಣೆ ನಡೆಯಲಿದೆ.
from India & World News in Kannada | VK Polls https://ift.tt/3aijVDs