ದೆಹಲಿ ಹಿಂಸಾಚಾರದ ಬೆನ್ನಲ್ಲೇ ಪ್ರಧಾನಿ ಮೋದಿಯನ್ನು ಭೇಟಿಯಾಗಲಿರುವ ಕೇಜ್ರಿವಾಲ್‌

ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಮಂಗಳವಾರ ಭೇಟಿಯಾಗಲಿದ್ದಾರೆ. ದೆಹಲಿಯ ಪ್ರಧಾನಿ ನಿವಾಸದಲ್ಲಿ ನಡೆಯಲಿರುವ ಈ ಭೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ದೆಹಲಿ ಚುನಾವಣೆಯ ಬಳಿಕ ಮೊದಲ ಬಾರಿಗೆ ಕೇಜ್ರಿವಾಲ್‌ ಪ್ರಧಾನಿ ಮೋದಿಯವನ್ನು ಭೇಟಿಯಾಗುತ್ತಿದ್ದು ಮಹತ್ವದ ಮಾತುಕತೆ ನಡೆಯುವ ಸಾಧ್ಯತೆ ಇದೆ. ದೆಹಲಿ ಹಿಂಸಾಚಾರ ಹಾಗೂ ಸಾವು ನೋವುಗಳ ಹಿನ್ನೆಲೆಯಲ್ಲಿ ಮಾತುಕತೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ದೆಹಲಿ ಹಿಂಸಾಚಾರದ ಬೆನ್ನಲ್ಲೇ ರಾಜಕೀಯ ಆರೋಪ ಪ್ರತ್ಯಾರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ. ಘಟನೆಗೆ ಆಮ್‌ ಆದ್ಮಿ ಪಕ್ಷ ಕಾರಣವೆಂದು ಬಿಜೆಪಿ ಆರೋಪಿಸಿದರೆ ಬಿಜೆಪಿ ಪಕ್ಷ ಹೊಣೆ ಎಂದು ಆಪ್‌ ಮುಖಂಡರು ಆರೋಪಿಸಿದ್ದಾರೆ. ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೂ ಕಾಂಗ್ರೆಸ್ ಒತ್ತಾಯಿಸಿದೆ. ಸಂಸತ್‌ನ ಉಭಯ ಸನದಲ್ಲೂ ದೆಹಲಿ ಹಿಂಸಾಚಾರ ವಿಚಾರ ಸಾಕಷ್ಟು ಸದ್ದು ಮಾಡಿದ್ದು ಆಡಳಿತ ಹಾಗೂ ವಿಪಕ್ಷಗಳ ನಡುವಿನ ಜಟಾಪಟಿಗೆ ಕಾರಣವಾಗಿದೆ. ದೆಹಲಿ ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಶಾಂತಿ ಸ್ಥಾಪನೆ ಹಾಗೂ ಸಂತ್ರಸ್ತರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಜೊತೆಗೆ ಅರವಿಂದ್ ಕೇಜ್ರಿವಾಲ್‌ ಚರ್ಚೆ ನಡೆಸುವ ಸಾಧ್ಯತೆ ಇದೆ.


from India & World News in Kannada | VK Polls https://ift.tt/32IEvKd

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...