ಕೊರೊನಾ ಆತಂಕ: ಸಚಿವ ಸಂಪುಟದ ತುರ್ತು ಸಭೆ ಕರೆದ ಬಿಎಸ್‌ವೈ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆತಂಕ ಎದುರಾಗಿರುವುದರಿಂದ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸಚಿವ ಸಂಪುಟದ ತುರ್ತು ಸಭೆಯನ್ನು ಕರೆದಿದ್ದಾರೆ. ಬುಧವಾರ ಮಾಧ್ಯಾಹ್ನ 1.30ಕ್ಕೆ ಸಭೆ ನಡೆಯಲಿದ್ದು, ಮಹತ್ವದ ನಿರ್ಧಾರಗಳು ಪ್ರಕಟಗೊಳ್ಳುವ ಸಾಧ್ಯತೆ ಇದೆ. ರಾಜ್ಯದಲ್ಲಿ ಇದುವರೆಗೆ 11 ಕೋವಿಡ್‌ 19 ಪ್ರಕರಣಗಳು ಪತ್ತೆಯಾಗಿದ್ದು ಆತಂಕ ಮೂಡಿಸಿದೆ. ಮಂಗಳವಾರ 32 ಮಂದಿಯನ್ನು ಒಳರೋಗಿಗಳಾಗಿ ಪ್ರತ್ಯೇಕಿಸಲಾಗಿದೆ. ಶಂಕಿತರ ಸಂಖ್ಯೆಯಲ್ಲೂ ಹೆಚ್ಚಳವಾಗುತ್ತಿರುವುದು ಭೀತಿ ಮೂಡಿಸಿದೆ. ಕೊರೊನಾ ಸೋಂಕು ಶಂಕಿತರ ಮೇಲೆ ಜಿಪಿಎಸ್‌ ಮೂಲಕ ನಿಗಾ ಇಡಲು ಸರ್ಕಾರ ನಿರ್ಧರಿಸಿದ್ದು, ಆರೋಗ್ಯ ಇಲಾಖೆ ಹಾಗೂ ಗೃಹ ಇಲಾಖೆ ಜಂಟಿಯಾಗಿ ಈ ಕೆಲಸವನ್ನು ನಿರ್ವಹಿಸಲಿದೆ. ಈ ನಿಟ್ಟಿನಲ್ಲಿ ಅಗತ್ಯ ಮುಂಜಾಗರೂಕತಾ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಳ್ಳುತ್ತಿದೆ. ಈಗಾಗಲೇ ಒಂದು ವಾರಗಳ ಕಾಲ ಸಭೆ ಸಮಾರಂಭ, ಅದ್ದೂರಿ ಮದುವೆಗಳಿಗೆ ನಿರ್ಬಂಧ ಹೇರಲಾಗಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ಈ ನಿರ್ಬಂಧವನ್ನು ಮುಂದುವರಿಸುವ ಸಾಧ್ಯತೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಬುಧವಾರ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸಚಿವ ಸಂಪುಟದ ತುರ್ತು ಸಭೆಯನ್ನು ಕರೆದಿದ್ದಾರೆ. ಸಭೆಯಲ್ಲಿ ಪ್ರಮುಖ ಚರ್ಚೆಗಳು ನಡೆಯುವ ಸಾಧ್ಯತೆ ಇದ್ದು ಮಹತ್ವದ ನಿರ್ಧಾರ ಪ್ರಟಕಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.


from India & World News in Kannada | VK Polls https://ift.tt/33ryO3r

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...