ಅರೆಸ್ಟ್‌ ಕೊರೊನಾ ! ಬೆಂಗಳೂರು ಪೊಲೀಸರಿಂದ ಜಾಗೃತಿ ಅಭಿಯಾನ

ಬೆಂಗಳೂರು: ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ವಿಶಿಷ್ಟ ಜಾಗೃತಿ ಅಭಿಯಾನವನ್ನು ಕೈಗೊಂಡಿದ್ದಾರೆ. 'ಕೊರೊನಾ ಬಂಧಿಸಿ' ಎಂಬ ಹೆಸರಿನಲ್ಲಿ ಅಭಿಯಾನವನ್ನು ಶುರುಮಾಡಿದ್ದು, ಜನರೂ ಈ ಅಭಿಯಾನದಲ್ಲಿ ಭಾಗಿಯಾಗಿ ಸಲಹೆಗಳನ್ನು ನೀಡುವಂತೆ ಕೋರಿದ್ದಾರೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೊರೊನಾ ಪೀಡಿತರಿಗೆ ಸೂಕ್ತ ಚಿಕಿತ್ಸೆ ನೀಡುವುದರ ಜೊತೆಗೆ ಶಂಕಿತರ ಮೇಲೆ ನಿಗಾ ಇಟ್ಟಿದೆ. ಸೋಂಕು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಾಗೂ ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳಿಗೆ ಬೆಂಗಳೂರು ಪೊಲೀಸರು ಸಾಥ್ ನೀಡಲು ಮುಂದಾಗಿದ್ದು ‘ಕೊರೊನಾ ಬಂಧನಕ್ಕೆ’ ಅಭಿಯಾನ ಕೈಗೊಂಡಿದ್ದಾರೆ. ಈ ಕುರಿತಾಗಿ ಟ್ವೀಟ್‌ ಮಾಡಿರುವ ಬೆಂಗಳೂರು ನಗರ ಪೊಲೀಸ್‌ “ನಾಗರಿಕರಾದ ನಾವೆಲ್ಲರು ಕೊರೊನ ವೈರಸ್ ಬಗ್ಗೆ ಹೆಚ್ಚು ಜವಾಬ್ದಾರಿಯುತವಾಗಿ ವರ್ತಿಸುವ ಸಮಯವಿದು. ಇದರ ಬಗ್ಗೆ ಜನರಲ್ಲಿರುವ ತಪ್ಪು ಕಲ್ಪನೆಗಳನ್ನ ಹೊಗಲಾಡಿಸಲು, ಸರಿಯಾದ ಸುರಕ್ಷತಾ ಕ್ರಮಗಳನ್ನು ಪಾಲಿಸಲು ಬೆಂಗಳೂರು ನಗರ ಪೊಲೀಸ್ ಘಟಕದಿಂದ ಕೊರೊನ ಕುರಿತು ಜಾಗೃತ ಅಭಿಯಾನದಲ್ಲಿ ಭಾಗವಹಿಸಿ, ನಿಮ್ಮ ಸಲಹೆಗಳನ್ನು ಹಂಚಿಕೊಳ್ಳಿ” ಎಂದು ಮನವಿ ಮಾಡಿದ್ದಾರೆ. ಪೊಲೀಸರ ಈ ಅಭಿಯಾನಕ್ಕೆ ಜನರು ಕೂಡಾ ಮೆಚ್ಚುಗೆ ವ್ಯಕ್ತಪಡಿಸಿದ್ದು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಸದ್ಯ ರಾಜ್ಯದಲ್ಲಿ 15 ಕೋವಿಡ್‌-19 ಪ್ರಕರಣಗಳು ಪತ್ತೆಯಾಗಿವೆ. ಗುರುವಾರ ಕೊಡಗಿನಲ್ಲಿ ಹೊಸ ಪ್ರಕರಣ ಪತ್ತೆಯಾಗುವುದರೊಂದಿಗೆ ಇದರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಕೋವಿಡ್‌ -19 ನಿಯಂತ್ರಣದ ಹಿನ್ನೆಲೆಯಲ್ಲಿ ಸರ್ಕಾರ ಹಲವು ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡಿದ್ದು ಮಾರ್ಚ್‌ 31 ರ ತನಕ ನಿರ್ಬಂಧವನ್ನು ಮುಂದುವರಿಸಿದೆ.


from India & World News in Kannada | VK Polls https://ift.tt/3dbYeqw

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...