ನವದೆಹಲಿ: ವಲಸೆ ಕಾರ್ಮಿಕರ ಅನುಕೂಲಕ್ಕಾಗಿ ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ಕೇಂದ್ರ ಸರ್ಕಾರ ವಿಶೇಷಬಸ್ ವ್ಯವಸ್ಥೆ ಮಾಡಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಿಂದ ಈ ವಿಶೇಷ ಬಸ್ಗಳು ಸಂಚಾರ ನಡೆಸಿವೆ. ಆದೇಶದಿಂದ ಸಂಕಷ್ಟಕ್ಕೆ ಸಿಲುಕಿರುವ , ಅನ್ಯ ಮಾರ್ಗವಿಲ್ಲದೇ ನಡೆದುಕೊಂಡೇ ತಮ್ಮ ತಮ್ಮ ಸ್ವಂತ ರಾಜ್ಯಗಳಿಗೆ ತಲುಪುತ್ತಿದ್ದು, ಈ ಹಿನ್ನೆಲೆಯಲ್ಲಿ ಅವರ ಅನುಕೂಲಕ್ಕಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ವಿವಿಧ ಬಸ್ ನಿಲ್ದಾಣಗಳಲ್ಲಿ ಸಾವಿರಾರು ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ಹೋಗಲು ಲಗ್ಗೆ ಇಟ್ಟಿದ್ದಾರೆ. ಪ್ರವಾಹದಂತೆ ಹರಿದು ಬಂದಿರುವ ವಲಸೆ ಕಾರ್ಮಿಕರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ದೆಹಲಿಯ ಆನಂದ್ ವಿಹಾರ್ ಬಸ್ ನಿಲ್ದಾಣಕ್ಕೆ ನಿನ್ನೆ(ಮಾ.28) ರಾತ್ರಿಯೇ ಸಾವಿರಾರು ವಲಸೆ ಕಾರ್ಮಿಕರು ಕುಟುಂಬ ಸಮೇತರಾಗಿ ಲಗ್ಗೆ ಇಟ್ಟಿದ್ದು, ಬಸ್ ಮೂಲಕ ತಮ್ಮ ತಮ್ಮ ಊರುಗಳಿಗೆ ತೆರಳಲು ಮುಗಿ ಬಿದ್ದಿದ್ದಾರೆ. ಇಷ್ಟೊಂದು ಭಾರೀ ಸಂಖ್ಯೆಯಲ್ಲಿ ಜನಮಾವಣೆಗೊಂಡಿರುವ ವಲಸೆ ಕಾರ್ಮಿಕರನ್ನು ಬಸ್ಗಳ ಮೂಲಕ ರವಾನಿಸುವುದು ಪೊಲೀಸರಿಗೂ ತಲೆನೋವಾಗಿ ಪರಿಣಮಿಸಿದ್ದು, ವೈರಾಣು ಹರಡುವ ಭೀತಿಯೂ ಎದುರಾಗಿದೆ.
from India & World News in Kannada | VK Polls https://ift.tt/2xyCpRk