ಕೊರೊನಾ ಆತಂಕ; ಕೊನೆಗೂ ಪರೀಕ್ಷೆ ಮುಂದೂಡಿದ ಕೆಪಿಎಸ್‌ಸಿ

ಬೆಂಗಳೂರು: ಕೋವಿಡ್‌ -19 ಸೋಂಕು ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಿರ್ಬಂಧ ಜಾರಿಯಲ್ಲಿದ್ದರೂ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ) ಮಾರ್ಚ್‌ 22 (ಭಾನುವಾರ) ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಪರೀಕ್ಷೆಯನ್ನು ಇಟ್ಟುಕೊಂಡಿತ್ತು. ಆದರೆ ನಡೆಗೆ ಅಭ್ಯರ್ಥಿಗಳ ವಿರೋಧ ವ್ಯಕ್ತವಾಗಿತ್ತು. ಇದೀಗ ಅಭ್ಯರ್ಥಿಗಳ ಒತ್ತಡಕ್ಕೆ ಮಣಿದ ಕೆಪಿಎಸ್‌ಸಿ ಕೊನೆಗೂ ಪರೀಕ್ಷೆಯ ದಿನಾಂಕವನ್ನು ಮುಂದೂಡಿದೆ. ಕೋವಿಡ್‌-19 ಸೋಂಕು ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾರ್ಚ್‌ 31 ರ ತನಕ ನಿರ್ಬಂಧವನ್ನು ಮುಂದುವರಿಸಲಾಗಿದೆ. ಸೋಂಕು ಪ್ರಕರಣ ಹೆಚ್ಚಾಗುತ್ತಿರುವುದರಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಪರೀಕ್ಷೆ ನಡೆಸಲು ಕೆಪಿಎಸ್‌ಸಿ ನಿರ್ಧರಿಸಿತ್ತು. ಆದರೆ ಇದಕ್ಕೆ ಅಭ್ಯರ್ಥಿಗಳು ವಿರೋಧ ವ್ಯಕ್ತಪಡಿಸಿದ್ದರು. ಪರೀಕ್ಷೆ ಬರೆಯಲು ದೇಶ ವಿದೇಶಗಳಿಂದ ಅಭ್ಯರ್ಥಿಗಳು ಆಗಮಿಸುತ್ತಿರುವುದರಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಪರೀಕ್ಷೆಯನ್ನು ಮುಂದೂಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಮಾಧ್ಯಮಗಳಲ್ಲೂ ಈ ಸುದ್ದಿ ಪ್ರಕಟಗೊಂಡಿತ್ತು. ಕೊನೆಗೂ ಗುರುವಾರದಂದು ಪರೀಕ್ಷೆಯನ್ನು ಅನಿರ್ದಿಷ್ಟಾವಧಿಗಳ ಕಾಲ ಮುಂದೂಡುವ ನಿರ್ಧಾರವನ್ನು ಕೆಪಿಎಸ್‌ಸಿ ಕೈಗೊಂಡಿದೆ. ಈ ಕುರಿತಾಗಿ ಕರ್ನಾಟಕ ಲೋಕಸೇವಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಕೆ.ಪಿ.ಎಸ್‌.ಸಿ ನಿರ್ಧಾರವನ್ನು ಆತಂಕದಲ್ಲಿದ್ದ ಅಭ್ಯರ್ಥಿಗಳು ಸ್ವಾಗತಿಸಿದ್ದಾರೆ. ರಾಜ್ಯದಲ್ಲಿ ಇದುವರೆಗೆ 15 ಕೋವಿಡ್‌-19 ಪ್ರಕರಣಗಳು ಕಾಣಿಸಿಕೊಂಡಿವೆ. ಹಲವರಲ್ಲಿ ಸೋಂಕು ಇಡುವ ಶಂಕೆ ಇದೆ. ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳುತ್ತಿದೆ.


from India & World News in Kannada | VK Polls https://ift.tt/2J0pJW5

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...