ಕಂಡಲ್ಲಿ ಗುಂಡು ಆದೇಶ ಜಾರಿಯ ಅನಿವಾರ್ಯತೆ ಸೃಷ್ಟಿಸಬೇಡಿ: ಕೆಸಿಆರ್ ಮನವಿ!

ಹೈದರಾಬಾದ್: ಕೊರೊನಾ ವೈರಸ್ ವಿರುದ್ಧದ ಹೋರಾಟದ ಭಾಗವಾಗಿ ಇಡೀ ದೇಶವನ್ನು 21 ದಿನಗಳ ಕಾಲ ಮಾಡಿರುವ ಕೇಂದ್ರ ಸರ್ಕಾರದ ಆದೇಶವನ್ನು ಸಿಎಂ ಕೆಸಿ ಚಂದ್ರಶೇಖರ್ ರಾವ್ ಸ್ವಾಗತಿಸಿದ್ದಾರೆ. ಈ ಕುರಿತು ಮಾದ್ಯಮದವರೊಂದಿಗೆ ಮಾತನಾಡಿರುವ , ಪ್ರಧಾನಿ ಮೋದಿ ಅವರ ಆದೇಶದಂತೆ ಇಡೀ ರಾಜ್ಯವನ್ನು ಲಾಕ್‌ಡೌನ್ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ಲಾಕ್‌ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿರುವ ಕೆಸಿಆರ್, ಮನೆಯಿಂದ ಹೊರಬರುವ ಮೂಲಕ ಸರ್ಕಾರಕ್ಕೆ ಆದೇಶ ಜಾರಿ ಮಾಡುವ ಅನಿವಾರ್ಯತೆ ಸೃಷ್ಟಿಸಬೇಡಿ ಎಂದು ಜನತೆಗೆ ಮನವಿ ಮಾಡಿದ್ದಾರೆ. ಲಾಕ್‌ಡೌನ್ ಆದೇಶ ಪಾಲನೆಯಾಗದಿದ್ದರೆ ಕಂಡಲ್ಲಿ ಗುಂಡು ಆದೇಶವನ್ನು ಜಾರಿ ಮಾಡುವ ಕುರಿತು ಸರ್ಕಾರ ಯೋಚಿಸಬೇಕಾಗುತ್ತದೆ ಎಂದೂ ಕೆಸಿಆರ್ ಗಂಭೀರ ಎಚ್ಚರಿಕೆ ನೀಡಿದ್ದಾರೆ. ಲಾಕ್‌ಡೌನ್ ಆದೇಶವನ್ನು ಅತ್ಯಂತ ಕಟ್ಟುನಿಟ್ಟಾಗಿ ಪಾಲಿಸುತ್ತಿರುವುದಾಗಿ ಹೇಳಿರುವ ತೆಲಂಗಾಣ ಸಿಎಂ, ಯಾರೂ ಕೊರೊನಾ ಮಾರ್ಗಸೂಚಿಗಳನ್ನು ಮೀರದಂತೆ ಮನವಿ ಮಾಡಿದ್ದಾರೆ. ಎಲ್ಲಾ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂದು ಭರವಸೆ ನೀಡಿರುವ ಕೆಸಿಆರ್, ಜನತೆ ಆತಂಕಪಡದೇ ಮನೆಯಲ್ಲೇ ಉಳಿದು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಕಳಕಳಿಯ ಮನವಿ ಮಾಡಿದ್ದಾರೆ.


from India & World News in Kannada | VK Polls https://ift.tt/2vMoXJc

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...