ಕೊರೊನಾ ಮುನ್ನೆಚ್ಚರಿಕೆ: ಬಿಎಸ್‌ವೈ ಕ್ಯಾಬಿನೆಟ್ ಸಭೆಯಲ್ಲಿ ಸಾಮಾಜಿಕ ಅಂತರ

ಬೆಂಗಳೂರು: ಕೊರೊನಾ ಹರಡದಂತೆ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಗುರುವಾರ ನಡೆದ ಕ್ಯಾಬಿನೆಟ್‌ ಸಭೆಯಲ್ಲೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲಾಗಿದೆ. ವಿಧಾನಸೌಧದ ವಿಶಾಲವಾದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೊರೊನಾ ನಿಯಂತ್ರಣದ ಕುರಿತಾಗಿ ಮಹತ್ವದ ಚರ್ಚೆಗಳು ನಡೆದವು. ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರ ಸ್ವರೂಪದಲ್ಲಿ ಹರಡುತ್ತಿದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿದೆ. ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಸರ್ಕಾರ ಸೂಚನೆಯನ್ನು ನೀಡುತ್ತಿದೆ. ಅಷ್ಟೇ ಅಲ್ಲದೆ ಸರ್ಕಾರದ ಸಭೆಗಳನ್ನು ಸಾಕಷ್ಟು ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಗುರುವಾರ ನಡೆದ ಕ್ಯಾಬಿನೆಟ್‌ ಸಭೆಯಲ್ಲೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲಾಯಿತು. ಸಾಮಾನ್ಯವಾಗಿ ಸಚಿವ ಸಂಪುಟ ಸಭೆ ಕ್ಯಾಬಿನೆಟ್‌ ಹಾಲ್‌ನಲ್ಲಿ ನಡೆಸಲಾಗುತ್ತದೆ. ವಿಧಾನಸೌಧದ ಮೂರನೇ ಮಹಡಿಯಲ್ಲಿ ಸಿಎಂ ಕಚೇರಿ ಎದುರು ಸಂಪುಟ ಸಭೆ ನಡೆಸಲು ಪ್ರತ್ಯೇಕ ಸಭಾಂಗಣವಿದೆ. ಆದರೆ ಕೊರೊನಾ ಮುಂಜಾಗ್ರತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ದೃಷ್ಟಿಯಿಂದ ವಿಶಾಲವಾದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ಸಂಪುಟ ಸಭೆ ನಡೆಸಲಾಯಿತು. ಸಚಿವ ಸಂಪುಟ ಸಭೆಯಲ್ಲಿ ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತಾಗಿ ಚರ್ಚೆ ನಡೆಸಲಾಯಿತು. ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಪರಿಸ್ಥಿತಿ ಹಾಗೂ ಸೋಂಕಿತರ ಆರೋಗ್ಯ ಸ್ಥಿತಿ ಕುರಿತಾಗಿಯೂ ಚರ್ಚೆ ನಡೆದಿದೆ. ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಎಲ್ಲಾ ಸಚಿವರು ಇದಕ್ಕಾಗಿ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ಸಂಪುಟ ಸಭೆಯಲ್ಲಿ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.


from India & World News in Kannada | VK Polls https://ift.tt/3bFSN1x

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...