ಬೆಂಗಳೂರು: ರಾಜ್ಯದ ಪ್ರಭಾವಿ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ ()ಕ್ಕೆ ಸೇರಿಸಬೇಕೆಂಬ ಬೇಡಿಕೆಯೊಂದಿಗೆ ನಡೆಯುತ್ತಿರುವ ಹೋರಾಟಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಬೆಂಬಲ ವ್ಯಕ್ತಪಡಿಸಿದ್ದಾರೆ. "ಸಮಾಜದ ಸಂಘಟನೆಗಾಗಿ ಹೋರಾಡಲು ಮುಂದೆ ಬಂದಿರುವೆ," ಎಂದು ಅವರು ಶುಕ್ರವಾರ ಘೋಷಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಈಶ್ವರಪ್ಪ, "ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಮಹಾರಾಷ್ಟ್ರ ರಾಜ್ಯಗಳಲ್ಲಿ ಈಗಾಗಲೇ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲಾಗಿದೆ. ನಾವೆಲ್ಲರೂ ಒಗ್ಗಟ್ಟಾಗಿ ಇರಬೇಕು, ರಾಜ್ಯದ ಕುರುಬ ಸಮಾಜವನ್ನು ಒಂದೆಡೆ ಸೇರಿಸುವ ಶಕ್ತಿ ನಮಗೆಲ್ಲರಿಗೂ ಇದೆ," ಎಂದು ವಿವರಿಸಿದರು. ಸಭೆಯಲ್ಲಿ ಮಾಜಿ ಸಂಸದ ವಿರೂಪಾಕ್ಷಪ್ಪ, ಮಾಜಿ ಸಚಿವರಾದ ಎಚ್ ವಿಶ್ವನಾಥ್, ಎಚ್‌ಎಂ ರೇವಣ್ಣ, ಬಂಡೆಪ್ಪ ಕಾಶೆಂಪುರ, ಮೇಲ್ಮನೆ ಸದಸ್ಯ ವಿವೇಕರಾವ್ ಪಾಟೀಲ್, ಮುಕುಡಪ್ಪ ಹಾಗೂ ಪುಟ್ಟಸ್ವಾಮಿ ಅವರು ಭಾಗವಹಿಸಿದ್ದರು.
from India & World News in Kannada | VK Polls https://ift.tt/2WEcq5s