ಇಂದಿನ ಚುಟುಕು ಸುದ್ದಿಗಳು: ಕೊರೊನಾ ಆತಂಕ, ಸಚಿವ ಸಂಪುಟದ ತುರ್ತು ಸಭೆ ಕರೆದ ಬಿಎಸ್‌ವೈ

*ಕೊರೊನಾ ಆತಂಕ, ಸಚಿವ ಸಂಪುಟದ ತುರ್ತು ಸಭೆ ಕರೆದ ಬಿಎಸ್‌ವೈ ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದ್ದು, ಸೋಂಕು ಹರಡದಂತೆ ತಡೆಗಟ್ಟಲು ಸರ್ಕಾರ ಹಲವು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಚರ್ಚೆ ನಡೆಸಲು ಸಿಎಂ ಬಿಎಸ್ ಯಡಿಯೂರಪ್ಪ ಬುಧವಾರ 1.30 ಕ್ಕೆ ತುರ್ತು ಕ್ಯಾಬಿನೆಟ್‌ ಸಭೆಯನ್ನು ಕರೆದಿದ್ದಾರೆ. *ನೀರಿನ ಸಮಸ್ಯೆ: ಜಿಲ್ಲಾಧಿಕಾರಿಯ ಕಾರಿನ ಮುಂದೆ ಪ್ರತಿಭಟನೆ ಬೆಂಗಳೂರು ಗ್ರಾಮಾಂತರ:ಗ್ರಾಮದಲ್ಲಿ ಕೆಲವು ಪ್ರಭಾವಿ ವ್ಯಕ್ತಿಗಳು ಸ್ವಂತ ಜಮೀನಿನಲ್ಲಿ ಬೋರ್ ವೆಲ್ ಕೊರೆಸಿ ನೀರು ಮಾರಾಟಕ್ಕೆ ಮುಂದಾದ ಪರಿಣಾಮ, ಗ್ರಾಪಂ ಕೊಳವೆ ಬಾವಿಯಲ್ಲಿ ನೀರು ಕಡಿಮೆ ಆಗಿ ಸಮಸ್ಯೆ ಉಲ್ಬಣವಾಗಿದೆ. ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಮುತ್ಸಂದ್ರ ಗ್ರಾಮದಲ್ಲಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಕಾರಿಗೆ ಮುತ್ತಿಗೆ ಹಾಕಿದರು. *ಮತದಾರರ ಗುರುತಿನ ಚೀಟಿ ಪ್ರಕರಣ: ಅನರ್ಹ ಶಾಸಕ ಮುನಿರತ್ನಗೆ ಹೈಕೋರ್ಟ್‌ ನೋಟಿಸ್‌ ಬೆಂಗಳೂರು: 20 ಸಾವಿರಕ್ಕೂ ಹೆಚ್ಚು ಮತದಾರರ ಗುರುತಿನ ಚೀಟಿ ಪತ್ತೆ ಪ್ರಕರಣದ ಸಂಬಂಧ ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಅನರ್ಹ ಶಾಸಕ ಮುನಿರತ್ನ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್‌, ಸಿಬಿಐ ಮತ್ತು ಮುನಿರತ್ನಗೆ ನೋಟಿಸ್‌ ಜಾರಿಗೊಳಿಸಿದೆ. ಈ ಮೂಲಕ ರಾಜರಾಜೇಶ್ವರಿ ಕ್ಷೇತ್ರದ ಮುನಿರತ್ನಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. *ಬೆಂಗಳೂರಿನ ರೆಸಾರ್ಟ್‌ನಲ್ಲಿರುವ ಕೈ ಶಾಸಕರ ಭೇಟಿಗೆ ಯತ್ನ, ದಿಗ್ವಿಜಯ್ ಸಿಂಗ್ ಪೊಲೀಸರ ವಶಕ್ಕೆಬೆಂಗಳೂರಿನ ರೆಸಾರ್ಟ್‌ನಲ್ಲಿ ಉಳಿದುಕೊಂಡಿರುವ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರನ್ನು ಭೇಟಿಯಾಗಲು ಮಾಜಿ ಸಿಎಂ ದಿಗ್ವಿಜಯ್‌ ಸಿಂಗ್ ಯತ್ನಿಸಿದರು. ಇದಕ್ಕೆ ಅವಕಾಶ ನಿರಾಕರಣೆ ಮಾಡಿದ್ದಕ್ಕೆ ಪ್ರತಿಭಟನೆ ಮಾಡಿದ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. *ಬೆಂಗಳೂರು: ಗಮನಿಸಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ, ಎಲ್ಲೆಲ್ಲಿ? ಇಲ್ಲಿದೆ ವಿವರ ಬೆಂಗಳೂರು: ಬೆಂಗಳೂರು ಜಲಮಂಡಳಿಯ ಕಾವೇರಿ ನೀರು ಸರಬರಾಜು ಯೋಜನೆ 1ನೇ ಹಂತದ ಟಿ.ಕೆ.ಹಳ್ಳಿ, ಹಾರೋಹಳ್ಳಿ ಮತ್ತು ತಾತಗುಣಿಯ ಯಂತ್ರಾಗಾರಗಳಲ್ಲಿ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಮಾ.18ರ ಬೆಳಗ್ಗೆ 9ರಿಂದ ಮಧ್ಯಾಹ್ನ 3 ಗಂಟೆವರೆಗೆ ನಗರದ ಬಹುತೇಕ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.



from India & World News in Kannada | VK Polls https://ift.tt/2TZzwSu

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...