ಕೊರೊನಾ ಶಂಕಿತರು ಮನೆಯಿಂದ ಹೊರ ಬಂದರೆ ಕ್ರಮ, ಬಸವರಾಜ್ ಬೊಮ್ಮಾಯಿ ಎಚ್ಚರಿಕೆ

ಬೆಂಗಳೂರು: ಕೊರೊನಾ ಶಂಕಿತರು ಮನೆಯಿಂದ ಹೊರಗಡೆ ಬಂದರೆ ಅವರ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಅವರು, ಸಾರ್ವಜನಿಕರಿಗೆ ಜಾವಾಬ್ದಾರಿ ಇದೆ, ಮನೆಯಲ್ಲಿ ನಿಗಾದಲ್ಲಿ ಇರುವಂತೆ ಸೂಚಿಸಿದವರು ಹೊರಗಡೆ ಬರಬಾರದು, ಇದನ್ನು ಉಲ್ಲಂಘನೆ ಮಾಡಿದವರ ಮೇಲೆ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಮನೆಯಲ್ಲಿ ನಿಗಾದಲ್ಲಿ ಇಡಲಾಗಿದ್ದ ವಿದೇಶದಿಂದ ಬಂದ ವ್ಯಕ್ತಿಯೊಬ್ಬ ಮೆಜೆಸ್ಟಿಕ್‌ನಲ್ಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಗೃಹ ಸಚಿವರು, ಹೋಂ ಕ್ವಾರೆಂಟೇನ್‌ನಲ್ಲಿ ಇರುವವರು ಮನೆಯಿಂದ ಹೊರಗಡೆ ಬಂದರೆ ಅಂಥವರನ್ನು ಮಾಸ್‌ ಕ್ವಾರಂಟೇನ್‌ಗೆ ಸಾಗಿಸಬೇಕಾಗುತ್ತದೆ ಎಂದರು. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು ಮಾರ್ಚ್‌ 22 ರ ತನಕ 21 ಮಂದಿಯಲ್ಲಿ ಕೋವಿಡ್‌- 19 ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾಕಷ್ಟು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪಿಯುಸಿ ಪರೀಕ್ಷೆ ಸೋಮವಾರದಂದು ನಡೆಯಲಿದೆ. ಕೇವಲ ಒಂದೇ ಪೇಪರ್‌ ಬಾಕಿ ಉಳಿದಿರುವುದರಿಂದ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ ಎಂದು ಬಸವರಾಜ್‌ ಬೊಮ್ಮಾಯಿ ಹೇಳಿದರು. ಕೊರೊನಾ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ವಿಶೇಷ ಆಸ್ಪತ್ರೆಯಾಗಿ ಪರಿವರ್ತನೆ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದ್ದು, ಸೋಂಕು ಹರಡದಂತೆ ಗಡಿಗಳನ್ನು ಮುಚ್ಚಲು ತೀರ್ಮಾನಿಸಿದೆ. ಅಲ್ಲದೆ ಅಂತರಾಷ್ಟ್ರೀಯ ವಿಮಾನದಲ್ಲಿ ಬರುವ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸುವುದರ ಜೊತೆಗೆ ಇನ್ನು ಮುಂದೆ ಸ್ಥಳೀಯ ವಿಮಾನದ ಪ್ರಯಾಣಿಕರನ್ನು ಸಹ ತಪಾಸಣೆಗೆ ಒಳಪಡಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ.


from India & World News in Kannada | VK Polls https://ift.tt/2ww0PuP

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...