ಶಾಲೆಗೆ ರಜೆ ಇದ್ರೂ ತಪ್ಪಿಲ್ಲ ಶುಲ್ಕದ ತಲೆನೋವು ! ಸುರೇಶ್ ಕುಮಾರ್‌ಗೆ ಪೋಷಕರ ಪತ್ರ

ಬೆಂಗಳೂರು: ಕೊರೊನಾ ಸೋಂಕು ಭೀತಿಯಲ್ಲಿ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಎಸ್‌.ಎಸ್‌.ಎಲ್.ಸಿ ಹಾಗೂ ಪಿ.ಯು.ಸಿ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಹೀಗಿದ್ದರೂ ಶಾಲೆಯ ಆಡಳಿತ ಮಂಡಳಿ ಪೋಷಕರಿಂದ ಶುಲ್ಕ ವಸೂಲಿ ಮಾಡುವುದರಲ್ಲಿ ಬ್ಯುಸಿಯಾಗಿದೆ. ಬೆಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯೊಂದು ಎಪ್ರಿಲ್‌ 15 ರ ಒಳಗಾಗಿ ಶಾಲಾ ಶುಲ್ಕವನ್ನು ಕಡ್ಡಾಯವಾಗಿ ಪಾವತಿ ಮಾಡಬೇಕು ಎಂದು ಸೂಚನೆಯನ್ನು ನೀಡಿದ್ದು ಪೋಷಕರ ಅಸಮಾಧಾನಕ್ಕೆ ಕಾರಣವಾಗಿದೆ. ಶುಲ್ಕ ಪಾವತಿಗೆ ಒತ್ತಡ ಹೇರದಂತೆ ಸರ್ಕಾರದ ಆದೇಶ ಇದ್ದರೂ, ಇದನ್ನು ಖ್ಯಾರೇ ಎನ್ನದ ಬೆಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ವಿರುದ್ಧ ಶಿಕ್ಷಣ ಸಚಿವ ಅವರಿಗೆ ಪೋಷಕರು ಪತ್ರ ಬರೆದಿದ್ದಾರೆ. ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿದ್ಯಾರ್ಥಿಗಳ ಫೋಷಕರು ಬರೆದಿರುವ ಪತ್ರದಲ್ಲಿ ಸದ್ಯ ಕೊರೊನಾದಿಂದ ಆರ್ಥಿಕ ಸಂಕಷ್ಟವನ್ನು ಎಲ್ಲರೂ ಎದುರಿಸುತ್ತಿದ್ದಾರೆ. 21 ದಿನಗಳ ಕಾಲ ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣ ಬಂದ್ ಮಾಡಲು ಆದೇಶ ಇರುವುದರಿಂದ ವ್ಯಾಪಾರದಲ್ಲಿ ಭಾರೀ ನಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಶಾಲಾ,ಕಾಲೇಜು ಶುಲ್ಕ ಪಾವತಿಗೆ ರಿಯಾಯಿತಿಯನ್ನು ನೀಡಬೇಕಾಗಿದೆ. ಆದರೆ ನಿಗದಿತ ಅವಧಿಯೊಳಗಾಗಿ ಶುಲ್ಕ ಪಾವತಿ ಮಾಡಲು ಸೂಚನೆ ನೀಡಿರುವುದಕ್ಕೆ ಪತ್ರದಲ್ಲಿ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಧ್ಯಪ್ರವೇಶ ಮಾಡಿ ಪೋಷಕರ ಮೇಲೆ ಶುಲ್ಕ ಪಾವತಿ ಮಾಡುವಂತೆ ಒತ್ತಡ ಹೇರುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.


from India & World News in Kannada | VK Polls https://ift.tt/2vWgPpI

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...