ಕೃಷಿ ವಿಶ್ವವಿದ್ಯಾಲಯಗಳ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗೆ ವೇತನ ಸಹಿತ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಬೆಂಗಳೂರು,ಧಾರವಾಡ, ರಾಯಚೂರು ಹಾಗೂ ಶಿವಮೊಗ್ಗದಲ್ಲಿರುವ ನಾಲ್ಕು ಕೃಷಿ ವಿಶ್ವವಿದ್ಯಾಲಯಗಳಲ್ಲಿನ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗೆ ಹಾಗೂ ಗುತ್ತಿಗೆ ಆಧಾರಿತ ಸಿಬ್ಬಂದಿಗೆ ಮಾರ್ಚ್‌ 23 ರಿಂದ ಮಾರ್ಚ್ 31ರವರೆಗೆ ರಜೆ ನೀಡುವಂತೆ ಕೃಷಿ ಸಚಿವ ಬಿ‌.ಸಿ.ಪಾಟೀಲ್ ಸೂಚಿಸಿದ್ದಾರೆ. ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆ ಮಾ‌. 21ರಂದು ಹೊರಡಿಸಿರುವ ಪತ್ರದನ್ವಯ ಸೋಂಕು ತಡೆಗಟ್ಟಲು ಮುಂಜಾಗರೂಕತಾ ಕ್ರಮವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ವೇತನ ಸಹಿತ ರಜೆ ನೀಡಲು ಸಚಿವರು ಸೂಚಿಸಿದ್ದಾರೆ. ಮಾ‌ರ್ಚ್ 14 ರಿಂದ 31ರವರೆಗೆ ವಿದ್ಯಾರ್ಥಿಗಳಿಗೆ ಈಗಾಗಲೇ ರಜೆಯನ್ನು ಘೋಷಿಸಲಾಗಿದೆ. ಅಲ್ಲದೆ ಪರೀಕ್ಷೆಗಳನ್ನು ಮುಂದೂಡಲಾಗಿದೆ. ರಜಾ ಸಮಯದಲ್ಲಿ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಸಂಶೋಧನೆಗೆ ಸಂಬಂಧಿಸಿದ ಸಂಶೋಧನ ಅಧ್ಯಯನ ಪಠ್ಯಕ್ರಮವನ್ನು ಆನ್‌ಲೈನ್ ಮೂಲಕ ಅಭಿವೃದ್ಧಿ ಪಡಿಸುವಂತೆ ಸೂಚಿಸಲಾಗಿದೆ. ವಿದ್ಯಾರ್ಥಿಗಳ ಪರೀಕ್ಷಾ ತಯಾರಿಗೆ ಪ್ರಶ್ನೆ ಪತ್ರಿಕೆಗಳನ್ನು ತಯಾರಿಸಲು ಮತ್ತು ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದೇಶಿ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ತಂಗಲು ಸುರಕ್ಷಿತ ವ್ಯವಸ್ಥೆ ಮಾಡುವಂತೆಯೂ ಸಚಿವರು ಸೂಚಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕು ಹರಡುತ್ತಿದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಇಗಾಗಲೇ ಎಸ್‌ಎಸ್ಎಲ್‌ಸಿ ಪರೀಕ್ಷೆ ಹಾಗೂ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಅಲ್ಲದೆ ಬೆಂಗಳೂರು ಸೇರಿದಂತೆ ಒಂಬತ್ತು ಜಿಲ್ಲೆಗಳನ್ನು ಲಾಕ್‌ಡೌನ್ ಮಾಡಲಾಗಿದೆ. ಮಾರ್ಚ್‌ 23 ರ ವರೆಗೆ ರಾಜ್ಯದಲ್ಲಿ ಒಟ್ಟು 27 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.


from India & World News in Kannada | VK Polls https://ift.tt/2QCAYbu

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...