ಕೊರೊನಾ ಆತಂಕ: ಮಾಹಿತಿಗಾಗಿ ರಾಜ್ಯ ಸರ್ಕಾರದಿಂದ ಟೆಲಿಗ್ರಾಮ್‌ ಗ್ರೂಪ್‌

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಜನರು ಭಯಭೀತರಾಗಿದ್ದಾರೆ. ಕೊರೊನಾ ರೋಗಲಕ್ಷಣಗಳು ಏನು ಎಂಬುವುದು ಹಲವರಿಗೆ ತಿಳಿದಿಲ್ಲ. ಸಾಮಾನ್ಯ ಶೀತ, ನೆಗಡಿಯಾದರೂ ಜನರು ಭಯಪಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಜನರಿಗೆ ಮಾಹಿತಿ ನೀಡಲು ರಾಜ್ಯ ಸರ್ಕಾರ ಸಾಮಾಜಿಕ ಜಾಲತಾಣವಾದ ಟೆಲಿಗ್ರಾಮ್‌ ಗ್ರೂಪನ್ನು ರಚಿಸಿದೆ. ಕೋವಿಡ್ 19 ಸಹಾಯ ಗ್ರೂಪ್‌ ಎಂಬ ಹೆಸರಿನಲ್ಲಿ ಟೆಲಿಗ್ರಾಮ್‌ ಗ್ರೂಪ್‌ ಒಂದನ್ನು ರಚನೆ ಮಾಡಲಾಗಿದ್ದು, ಜನರು ಇದಕ್ಕೆ ಸೇರ್ಪಡೆಗೊಳ್ಳುವ ಮೂಲಕ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಮಾಧ್ಯಮಗಳಲ್ಲಿ ಬರುವ ಮಾಹಿತಿಗಿಂತ ಇಲ್ಲಿ ತಜ್ಞರು ಅಧಿಕೃತವಾದ ಮಾಹಿತಿಯನ್ನು ನೀಡಲಿದ್ದಾರೆ. ಜನರಿಗೆ ಆತಂಕ, ಪ್ರಶ್ನೆ, ಅನುಮಾನಗಳಿದ್ದರೆ ಈ ಗುಂಪಿಗೆ ಸೇರ್ಪಡೆಗೊಂಡು ತಮ್ಮ ಪ್ರಶ್ನೆಗಳಿಗೆ ಉತ್ತರವನ್ನು ಪಡೆಯಬಹುದಾಗಿದೆ. ಈಗಾಗಲೇ ಗುಂಪಿಗೆ ಅನೇಕ ಮಂದಿ ಸೇರಿಕೊಂಡಿದ್ದು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಸಾಮಾನ್ಯ ಶೀತ ನೆಗಡಿಯಾದರೆ ಕೊರೊನಾ ಪರೀಕ್ಷೆಯನ್ನು ಮಾಡಿಕೊಳ್ಳಬೇಕಾ ಎಂದು ಹಲವರು ಪ್ರಶ್ನಿಸಿದ್ದಾರೆ. ಮತ್ತೆ ಕೆಲವರು ಮೆಡಿಕಲ್ ಶಾಪ್‌ಗಳಲ್ಲಿ ಮಾಸ್ಕ್‌ಗಳ ಕೊರತೆಯ ಬಗ್ಗೆಯೂ ದೂರಿಕೊಂಡಿದ್ದಾರೆ. ರಾಜ್ಯದಲ್ಲಿ ಇದುವರೆಗೂ 10 ಜನರಲ್ಲಿ ಕೋವಿಡ್‌ ಸೋಂಕು ಪತ್ತೆಯಾಗಿದ್ದು ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಇದೇ ಸಂದರ್ಭವನ್ನು ಬಳಸಿಕೊಂಡು ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುಳ್ಳು ಸುದ್ದಿಗಳಿಂದ ಜನರು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಸಾಮಾಜಿಕ ಜಾಲತಾಣಗಳನ್ನು ಬಳಸುವ ಮೂಲಕ ಜನರ ಆತಂಕವನ್ನು ದೂರ ಮಾಡಲು ನಿರ್ಧರಿಸಿದೆ.


from India & World News in Kannada | VK Polls https://ift.tt/2IOLKqR

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...