ಕೊರೊನಾಗಾಗಿ ರಜಾ ಕೊಟ್ರೆ ಜನ ಮಜಾ ಮಾಡ್ತಾರೆ! ಖಾದರ್ ಅಸಮಾಧಾನ

ಮಂಗಳೂರು: ಕೊರೊನಾ ಸೋಂಕು ಹರಡದಂತೆ ಮುಂಜಾಗರೂಕತಾ ಕ್ರಮವಾಗಿ ಸರ್ಕಾರ ರಜಾ ಘೋಷಣೆ ಮಾಡಿದರೆ ಜನರು ಮಾತ್ರ ಮಜಾ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಆರೋಗ್ಯ ಸಚಿವ ಶ್ರಿರಾಮುಲು ಅವರು ನಡೆಸಿದ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು ವಾಸ್ತವ ಸ್ಥಿತಿಯನ್ನು ವಿವರಿಸಿದರು. ಕೋವಿಡ್‌ 19 ಸೋಂಕು ಹರಡದಂತೆ ಸರ್ಕಾರ ಶಾಲಾ - ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿದೆ. ಜನರು ಮನೆಯಲ್ಲಿ ಇರಬೇಕು ಹೊರಗಡೆ ಹೆಚ್ಚಾಗಿ ಓಡಾಡಬಾರದು ಎಂಬುವುದು ಇದರ ಹಿಂದಿರುವ ಉದ್ದೇಶವಾಗಿದೆ. ಆದರೆ ಮಂಗಳೂರಿನ ಬೀಚ್‌ಗಳು ಜನರಿಂದ ತುಂಬಿಕೊಂಡಿವೆ ಎಂದು ಖಾದರ್‌ ಸಭೆಯಲ್ಲಿ ಆರೋಗ್ಯ ಸಚಿವರ ಗಮನಕ್ಕೆ ತಂದರು. ಮುಂಜಾಗರೂಕತಾ ಕ್ರಮವಾಗಿ ಜನರು ಮನೆಯಿಂದ ಹೊರಬಾರದಂತೆ ಕ್ರಮ ಕೈಗೊಳ್ಳಬೇಕು, ಬೀಚ್‌ಗಳಲ್ಲಿ ಕಾಣಿಸಿಕೊಂಡರೆ ದಂಡ ಹಾಕಬೇಕು ಎಂದು ಯು.ಟಿ ಖಾದರ್‌ ಒತ್ತಾಯಿಸಿದರು. ಜನರ ಈ ರೀತಿಯ ಬೇಜಾವಾಬ್ದಾರಿತನದಿಂದ ಕೋವಿಡ್‌ 19 ಸೋಂಕು ಹರಡುವ ಸಾಧ್ಯತೆ ಇದೆ ಎಂಬ ಆತಂಕವನ್ನು ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕೋವಿಡ್‌ 19 ಹಾಗೂ ಹಕ್ಕಿಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಮಂಗಳೂರಿನಲ್ಲಿ ವಿಭಾಗ ಮಟ್ಟದ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದರು. ಕೊರೊನಾ ಸೋಂಕು ಹರಡದಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಕುರಿತಾಗಿ ಮಾಹಿತಿಯನ್ನು ಪಡೆದುಕೊಂಡರು. ರಾಜ್ಯದಲ್ಲಿ ಕೋವಿಡ್‌ 19 ಸೋಂಕು 10 ಜನರಲ್ಲಿ ಕಾಣಿಸಿಕೊಂಡಿದ್ದು, ಇವರೆಲ್ಲರಿಗೂ ಪ್ರತ್ಯೇಕವಾಗಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಕಲಬುರಗಿ ಜಿಲ್ಲೆಯಲ್ಲಿ ಪರಿಸ್ಥಿತಿ ಸ್ವಲ್ಪ ಗಂಭೀರ ಸ್ವರೂಪ ಪಡೆದುಕೊಂಡಿದ್ದು ನಿಯಂತ್ರಣಕ್ಕಾಗಿ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ.


from India & World News in Kannada | VK Polls https://ift.tt/39WZ7kp

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...