ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹೇಗೆಂದು ಹೇಳಿ ಕೊಟ್ಟ ಮೋದಿ ನೇತೃತ್ವದ ಸಂಪುಟ ಸಭೆ

ನವದೆಹಲಿ: ಮಾರಕ ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಇಡೀ ದೇಶಾದ್ಯಂತ 21 ದಿನಗಳ ಲಾಕ್‌ಡೌನ್ ಹೇರಿರುವ ಕೇಂದ್ರ ಸರ್ಕಾರ, ಸೋಶಿಯಲ್ ಡಿಸ್ಟನ್ಸಿಂಗ್() ಕಾಯ್ದುಕೊಳ್ಳುವಂತೆ ಜನರಲ್ಲಿ ಮನವಿ ಮಾಡಿದೆ. ನಿನ್ನೆ(ಮಾ.24) ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಕೊರೊನಾ ವೈರಸ್ ತಡೆಗಟ್ಟಲು ಸಾಮಾಜಿಕ ಅಂತರ ಪ್ರಮುಖ ಸಾಧನ ಎಂದು ಹೇಳಿದ್ದರು. ಅದರಂತೆ ಜನತೆಗೆ ನೀಡಿದ್ದ ಸಲಹೆಯನ್ನು ತಾವೂ ಪಾಲಿಸುತ್ತಿರುವ ಪ್ರಧಾನಿ ಮೋದಿ ಸರ್ಕಾರ, ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಸಚಿವರು ಪರಸ್ಪರ ಅಂತರ ಕಾಯ್ದುಕೊಂಡು ಗಮನ ಸೆಳೆದರು. ಇದೇ ಮೊದಲ ಬಾರಿಗೆ ಟೇಬಲ್‌ಗಳನ್ನು ತೆಗೆದು ಹಾಕಿ ಕೇವಲ ಕುರ್ಚಿಗಳನ್ನಷ್ಟೇ ಬಳಸಿ ಸಚಿವ ಸಂಪುಟ ಸಭೆ ನಡೆಸಲಾಯಿತು. ಕುರ್ಚಿಗಳನ್ನು ನಿರ್ದಿಷ್ಟ ದೂರದಲ್ಲಿ ಇರಿಸುವ ಮೂಲಕ ಪರಸ್ಪರ ಅಂತರ ಕಾಯ್ದುಕೊಳ್ಳಲಾಯಿತು. ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ನಾವು ಸಾಮಾಜಿಕ ಅಂತರ ಕಾಯ್ದುಕೊಂಡು ಕೊರೊನಾ ವಿರುದ್ಧದ ಹೋರಾಟಕ್ಕೆ ಸಾಥ್ ನೀಡುತ್ತಿದ್ದೇವೆ. ನೀವೂ ಹಾಗೆಯೇ ಮಾಡುತ್ತಿದ್ದೀರಾ ಎಂದು ಜನತೆಯನ್ನು ಪ್ರಶ್ನಿಸಿದ್ದಾರೆ. ಸಾಮಾಜಿಕ ಅಂತರ ಈ ಕ್ಷಣದ ತುರ್ತು ಅಗತ್ಯವಾಗಿದ್ದು, ದೇಶವಾಸಿಗಳು ಇದನ್ನು ಪಾಲಿಸುವ ಮೂಲಕ ಕೊರೊನಾ ವೈರಸ್‌ನ್ನು ಈ ನೆಲದಿಂದ ಒದ್ದೊಡಿಸಲು ಸಹಕರಿಸಬೇಕು ಎಂದು ಅಮಿತ್ ಶಾ ಮನವಿ ಮಾಡಿದ್ದಾರೆ.


from India & World News in Kannada | VK Polls https://ift.tt/2QLXIWB

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...