ಕೊರೊನಾ ಭಯ, ಸೋಮವಾರ ಕೊನೆಗೊಳ್ಳುತ್ತಾ ಅಧಿವೇಶನ?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆತಂಕದ ಹಿನ್ನೆಲೆಯಲ್ಲಿ ವಿಧಾನಮಂಡಲ ಅಧಿವೇಶನವನ್ನು ಸೋಮವಾರವೇ ಕೊನೆಗೊಳಿಸುವ ನಿರ್ಧಾರವನ್ನು ಅಧಿಕೃತವಾಗಿ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಧಿವೇಶನದ ಹಿನ್ನೆಲೆಯಲ್ಲಿ ಜಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಪತ್ರಕರ್ತರು ಒಂದೇ ಕಡೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿರುವುದರಿಂದ ಈ ನಿರ್ಧಾರವನ್ನು ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಮಾರ್ಚ್‌ 2 ರಂದು ಆರಂಭಗೊಂಡಿರುವ ವಿಧಾನಮಂಡಲ ಅಧಿವೇಶನದಲ್ಲಿ ಬಜೆಟ್‌ ಕುರಿತಾಗಿ ಚರ್ಚೆಗಳು ನಡೆಯುತ್ತಿದೆ. ಮಾರ್ಚ್‌ 31 ರ ವರೆಗೆ ನಡೆಯಬೇಕಿದ್ದು, ಆದರೆ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣದ ಕಾರಣಕ್ಕಾಗಿ ಲಾಕ್‌ಡೌನ್ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಹೀಗಿದ್ದರೂ ನೂರಾರು ಜನರು ಸೇರುವ ಅಧಿವೇಶನವನ್ನು ನಡೆಸುವುದು ಸರಿಯಲ್ಲ ಎಂಬ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಜನರಿಗೆ ಒಂದು ಕಡೆ ಸೇರುವುದರಿಂದ ಕೊರೊನಾ ಹರಡುವ ಸಾಧ್ಯತೆ ಹೆಚ್ಚಿದೆ ಎಂದು ಹೇಳುವ ಸರ್ಕಾರ ಹಾಗೂ ಜನ ಪ್ರತಿನಿಧಿಗಳು ಅಧಿವೇಶನವನ್ನು ಏಕೆ ಮೊಟಕುಗೊಳಿಸುವುದಿಲ್ಲ ಎಂದು ಹಲವರು ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತುಕತೆ ನಡೆಸಿ ಸದನ ಮುಂದೂಡುವ ಸಲಹೆಯನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ನೀಡಿದ್ದಾರೆ ಎನ್ನಲಾಗಿದೆ. ಸೋಮವಾರ ಲೇಖಾನುದಾನಕ್ಕೆ ಒಪ್ಪಿಗೆಯನ್ನು ಪಡೆದುಕೊಂಡು ಸದನವನ್ನು ಅನಿರ್ಧಿಷ್ಟ ಅವಧಿಯ ಕಾಲ ಮುಂದೂಡುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ರಾಜ್ಯದಲ್ಲಿ ಮಾರ್ಚ್‌ 23 ರ ತನಕ ಕೋವಿಡ್‌ -19 ಸೋಂಕಿತರ ಸಂಖ್ಯೆ 26 ಕ್ಕೆ ಏರಿಕೆ ಕಂಡಿದೆ. ಭಾನುವಾರ ಒಂದೇ ದಿನ ಆರು ಕೊರೊನಾ ಪ್ರಕರಣಗಳು ದೃಢಪಟ್ಟಿದೆ. ಕೊರೊನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹೆಚ್ಚಿನ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.


from India & World News in Kannada | VK Polls https://ift.tt/3bp5UUF

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...