ಹೊಸದಿಲ್ಲಿ: ಮಟ್ಟ ಹಾಕಲು ಇಡೀ ದೇಶವೇ ಒಗ್ಗಟ್ಟಾಗಿ ಹೋರಾಟ ಸಾರಿದೆ. ಆಡಳಿತ ಪಕ್ಷ, ಪ್ರತಿಪಕ್ಷ ಬೇಧಭಾವ ಇಲ್ಲದೆ ಎಲ್ಲರೂ ಕೋವಿಡ್ 19 ಸೋಂಕು ಹರಡುವುದನ್ನು ತಡೆಯಲು ಹರಸಾಹಸ ಪಡುತ್ತಿದ್ದಾರೆ. ವೈದ್ಯಕೀಯ ಇಲಾಖೆಯಂತೂ ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸುತ್ತಿದೆ. ಈ ಮಧ್ಯೆ ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಮಾರ್ಚ್ 22 ಭಾನುವಾರದಂದು ದೇಶದ ಜನತೆ ಸ್ವಯಂ ಘೋಷಿತ ಜನತಾ ಕರ್ಫ್ಯೂ ಸಾರುವಂತೆ ಪ್ರಧಾನ ಮಂತ್ರಿ ಕರೆ ನೀಡಿದ್ದಾರೆ. ಪ್ರಧಾನಿ ಮೋದಿ ಕರೆಗೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಬಹುತೇಕ ಎಲ್ಲ ಕ್ರೀಡಾಪಟುಗಳು ಕೈಜೋಡಿಸಿದ್ದಾರೆ. ಮಾಜಿ ಆಟಗಾರರಾದ ಹಾಗೂ ಸಹ ಭಾನುವಾರ ಜನತಾ ಕರ್ಫ್ಯೂ ಸಾರುವಂತೆ ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದೀಗ ಕೈಫ್ ಟ್ವೀಟ್‌ಗೆ ಪ್ರತಿಯಾಗಿ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ, ಮಗದೊಮ್ಮೆ ಯುವರಾಜ್ ಸಿಂಗ್ ಹಾಗೂ ಮೊಹಮ್ಮದ್ ಕೈಫ್ ಜೊತೆಯಾಟಕ್ಕೆ ಸಮಯವಾಗಿದೆ ಎಂದಿದ್ದಾರೆ. "ಎರಡು ಅತ್ಯುತ್ತಮ ಕ್ರಿಕೆಟಿಗರು ಇಲ್ಲಿದ್ದಾರೆ. ನಿಮ್ಮ ಜೊತೆಯಾಟವನ್ನು ಎಂದಿಗೂ ಮರೆಯುವುದಿಲ್ಲ. ಈಗ ಅವರು ಹೇಳಿದಂತೆ, ಮಗದೊಂದು ಜೊತೆಯಾಟಕ್ಕೆ ಸಮಯವಾಗಿದೆ. ಈ ಬಾರಿ, ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಇಡೀ ಭಾರತವೇ ಪಾಲುದಾರರಾಗಲಿದ್ದಾರೆ" ಎಂದು ತಿಳಿಸಿದ್ದಾರೆ. ನಿಮಗೆಲ್ಲರಿಗೂ ತಿಳಿದಿರುವಂತೆಯೇ 2002ನೇ ಇಸವಿಯಲ್ಲಿ ನಡೆದ ನಾಟ್‌ವೆಸ್ಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಮಣಿಸಿದ್ದ ಭಾರತ ಪ್ರಶಸ್ತಿ ಗೆದ್ದಿತ್ತು. 326 ರನ್‌ಗಳ ಬೃಹತ್ ಮೊತ್ತ ಬೆನ್ನಟ್ಟಿದ ಭಾರತ ಒಂದು ಹಂತದಲ್ಲಿ 146 ರನ್‌ಗಳಿಗೆ ಐದು ವಿಕೆಟುಗಳನ್ನು ಕಳೆದುಕೊಂಡು ಭಾರಿ ಸಂಕಷ್ಟಕ್ಕೊಳಗಾಯಿತು. ಈ ಹಂತದಲ್ಲಿ ಜೊತೆಗೂಡಿದ ಯುವರಾಜ್ ಸಿಂಗ್ ಹಾಗೂ ಮೊಹಮ್ಮದ್ ಕೈಫ್ 121 ರನ್‌ಗಳ ಅಮೂಲ್ಯ ಜೊತೆಯಾಟದಲ್ಲಿ ಭಾಗಿಯಾದರು. 69 ರನ್ ಗಳಿಸಿದ ಯುವಿ ಕೊನೆಯ ಹಂತದಲ್ಲಿ ವಿಕೆಟ್ ಒಪ್ಪಿಸಿದರು. ಇನ್ನೊಂದೆಡೆ ದಿಟ್ಟ ಹೋರಾಟ ಮುಂದುವರಿಸಿದ ಕೈಫ್, ತಂಡವನ್ನು ಗೆಲುವಿನ ದಡ ಸೇರಿಸಿದರು. 75 ಎಸೆತಗಳನ್ನು ಎದುರಿಸಿದ ಕೈಫ್ ಆರು ಬೌಂಡರಿ ಹಾಗೂ ಎರಡು ಸಿಕ್ಸರ್‌ಗಳಿಂದ ಅಜೇಯ 87 ರನ್ ಗಳಿಸಿದರು. ವಿಶ್ವ ಪ್ರಸಿದ್ಧ ಲಾರ್ಡ್ಸ್ ಮೈದಾನದಲ್ಲಿ ನಡೆದ ಪಂದ್ಯದ ಗೆಲುವಿನ ಬಳಿಕ ನಾಯಕ ಸೌರವ್ ಗಂಗೂಲಿ ಶರ್ಟ್ ಬಿಚ್ಚಿ ಸಂಭ್ರಮಾಚರಣೆ ಮಾಡಿರುವ ನೆನಪುಗಳು ಇಂದಿಗೂ ಮಾಸದೇ ಉಳಿದಿದೆ. ಅಂದ ಹಾಗೆ ಮಾರ್ಚ್ 22 ಭಾನುವಾರ ಬೆಳಗ್ಗೆ 7ರಿಂದ ರಾತ್ರಿ 9ರ ವರೆಗೆ ಸ್ವಯಂ ಪ್ರೇರಿತ ನಿರ್ಬಂಧವನ್ನು ಹೇರಿ ಮನೆಯಲ್ಲೇ ಇರುವಂತೆಯೇ ಸೂಚಿಸಲಾಗಿದೆ. ಹಾಗೆಯೇ ಅದೇ ದಿನದಂದು ಸಂಜೆ 5 ಗಂಟೆಗೆ ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವವರಿಗಾಗಿ ಮನೆಯ ಬಾಗಿಲ ಬಳಿ ಬಂದು ಕೈಚಪ್ಪಾಳೆ ತಟ್ಟಿ ಪ್ರೋತ್ಸಾಹಿಸುವಂತೆಯೂ ಕರೆ ನೀಡಲಾಗಿದೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2WsFFZ8