ಧೋನಿ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ವೀರೇಂದ್ರ ಸೆಹ್ವಾಗ್

ಅಹಮದಾಬಾದ್: 2007 ಹಾಗೂ 2011ನೇ ಸಾಲಿನಲ್ಲಿ ನಾಯಕತ್ವದಲ್ಲಿ ಭಾರತ ಅನುಕ್ರಮವಾಗಿ ಚೊಚ್ಚಲ ಟಿ20 ಹಾಗೂ 28 ವರ್ಷಗಳ ಬಳಿಕ ಏಕದಿನ ವಿಶ್ವಕಪ್‌ಗಳನ್ನು ಗೆದ್ದಾಗ ಡ್ಯಾಶಿಂಗ್ ಓಪನರ್ ತಂಡದ ಅವಿಭಾಜ್ಯ ಅಂಗವಾಗಿದ್ದರು. ಆದರೆ ಕೆರಿಯರ್ ಅಂತ್ಯದ ಸಂದರ್ಭದಲ್ಲಿ ತಮ್ಮನ್ನು ಸೇರಿದಂತೆ ಹಿರಿಯ ಆಟಗಾರರನ್ನು ಕ್ಯಾಪ್ಟನ್ ಧೋನಿ ನಡೆಸಿಕೊಂಡಿರುವ ರೀತಿ ಬಗ್ಗೆ ನಿವೃತ್ತಿ ಬಳಿಕ ವೀರು ಬಹಿರಂಗವಾಗಿಯೇ ಅಸಮಾಧಾನವನ್ನು ತೋಡಿಕೊಂಡಿದ್ದರು. ಈಗ 38ರ ಹರೆಯದ ಧೋನಿಗೂ ಸಮಾನ ಪರಿಸ್ಥಿತಿ ಎದುರಾಗಿದೆ. ಪ್ರಸ್ತುತ ಧೋನಿ ಮಗದೊಮ್ಮೆ ಕಮ್‌ಬ್ಯಾಕ್ ಮಾಡುವ ಸಾಧ್ಯತೆ ಕಡಿಮೆಯಾಗಿದೆ ಎಂದು ವೀರು ಅಭಿಪ್ರಾಯಪಟ್ಟಿದ್ದಾರೆ. 2019 ಏಕದಿನ ವಿಶ್ವಕಪ್‌ನಲ್ಲಿ ಕೊನೆಯದಾಗಿ ಆಡಿರುವ ಮಹಿ ಅಲ್ಲಿಂದ ಬಳಿಕ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರವುಳಿದಿದ್ದಾರೆ. ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಆಡುವರೇ ಎಂಬುದು ತಿಳಿದು ಬಂದಿಲ್ಲ. ಈ ಬಗ್ಗೆ ಧೋನಿಯಾಗಲಿ ಅಥವಾ ಆಯ್ಕೆ ಮಂಡಳಿಯಾಗಲಿ ಯಾವುದೇ ಖಚಿತ ಮಾಹಿತಿಯನ್ನು ನೀಡಿಲ್ಲ. ಇನ್ನೊಂದೆಡೆ ಐಪಿಎಲ್‌ಗೆ ಪೂರ್ವ ಸಿದ್ಧತೆಯನ್ನು ಆರಂಭಿಸಿರುವ ಧೋನಿ, ಕಠಿಣ ತರಬೇತಿಯಲ್ಲಿ ತೊಡಗಿಸಿದ್ದರು. ಈ ಮೂಲಕ ಕಮ್‌ಬ್ಯಾಕ್ ಮಾಡುವ ಸೂಚನೆ ನೀಡಿದ್ದರು. ಈ ಮಧ್ಯೆ ಕೊರೊನಾ ಸೋಂಕು ಹರಡುತ್ತಿರುವ ಭೀತಿ ಹಿನ್ನೆಲೆಯಲ್ಲಿ ಐಪಿಎಲ್ 2020 ಟೂರ್ನಿಯನ್ನು ಏಪ್ರಿಲ್ 15ರ ವರೆಗೆ ಮುಂದೂಡಲಾಗಿದೆ. ಸಿಎಸ್‌ಕೆ ಕೂಡಾ ತನ್ನ ತರಬೇತಿ ಶಿಬಿರವನ್ನು ಮುಂದೂಡಿದೆ. ಪರಿಣಾಮ ಧೋನಿ ರಾಂಚಿಗೆ ಮರಳುವಂತಾಗಿದೆ. "ಕೆಎಲ್ ರಾಹುಲ್ ಹಾಗೂ ರಿಷಬ್ ಪಂತ್ ಅವರಂತಹ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್‌ಗಳು ಈಗಾಗಲೇ ಉತ್ತಮ ಫಾರ್ಮ್‌ನಲ್ಲಿರುವುದರಿಂದ ಧೋನಿಗೆ ಎಲ್ಲಿ ಸ್ಥಾನ ನೀಡುವೀರಿ? ನಾವು ಈ ಯೋಜನೆಯನ್ನು ಯಾಕೆ ಬದಲಾಯಿಸಬೇಕು" ಎಂದು ವೀರು ಪ್ರಶ್ನಿಸಿದ್ದಾರೆ. ಈ ಮೂಲಕ ಧೋನಿ ಪುನರಾಗಮನಕ್ಕೆ ಪರೋಕ್ಷ ವಿರೋಧ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಚಾಂಪಿಯನ್ ಆಟಗಾರನ ಕ್ರಿಕೆಟ್ ಭವಿಷ್ಯ ಏನಾಗಲಿದೆ ಎಂಬುದು ಬಹಳಷ್ಟು ಗೊಂದಲಗಳಿಗೆ ಎಡೆಮಾಡಿಕೊಟ್ಟಿದೆ. ನ್ಯೂಜಿಲೆಂಡ್ ಸರಣಿಯಲ್ಲಿನ ಕಳಪೆ ಪ್ರದರ್ಶನದ ಬಗ್ಗೆ ಪ್ರತಿಕ್ರಿಯೆ ನೀಡಿರುವ ವೀರು, ಏಕದಿನ ಹಾಗೂ ಟೆಸ್ಟ್‌ನಲ್ಲಿ ಕಿವೀಸ್ ನಮಗಿಂತಲೂ ಉತ್ತಮ ಪ್ರದರ್ಶನ ನೀಡಿರುವುದನ್ನು ಒಪ್ಪಿಕೊಳ್ಳಬೇಕು. ಟಿ20ನಲ್ಲೂ ನಿಕಟ ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿದೆ. ಚುಟುಕು ಕ್ರಿಕೆಟ್‌ನಲ್ಲಿ ಬೇಗನೇ ಕಮ್‌ಬ್ಯಾಕ್ ಮಾಡುವುದು ಕಷ್ಟಸಾಧ್ಯ ಎಂದರು. ಅದೇ ಹೊತ್ತಿಗೆ ಗಾಯ ಮುಕ್ತಗೊಂಡು ತಂಡಕ್ಕೆ ಆಗಮಿಸಿರುವ ಹಾರ್ದಿಕ್ ಪಾಂಡ್ಯ ತಮ್ಮ ಆಲ್‌ರೌಂಡರ್ ಸಾಮರ್ಥ್ಯದ ಮೂಲಕ ದೊಡ್ಡ ವ್ಯತ್ಯಾಸಕ್ಕೆ ಕಾರಣವಾಗಲಿದ್ದಾರೆ ಎಂಬುದನ್ನು ವೀರು ಅಭಿಪ್ರಾಯಪಟ್ಟರು.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2UeNcrH

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...