ಜನತಾ ಕರ್ಫ್ಯೂ ಮಧ್ಯೆಯೇ ಶಾಹೀನ್ ಬಾಗ್ ಪ್ರತಿಭಟನೆ ಸ್ಥಳದಲ್ಲಿ ಪೆಟ್ರೋಲ್ ಬಾಂಬ್ ಎಸೆತ!

ನವದೆಹಲಿ: ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಇಂದು ದೇಶಾದ್ಯಂತ ಜನತಾ ಕರ್ಫ್ಯೂ ಆಚರಿಸಲಾಗುತ್ತಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ದೈನಂದಿನ ವ್ಯವಹಾರಗಳು ದೇಶಾದ್ಯಂತ ಸ್ಥಗಿತಗೊಂಡಿವೆ. ಆದರೆ ಸಿಎಎ ವಿರೋಧಿ ಪ್ರತಿಭಟನೆ ಮಾತ್ರ ಇದಕ್ಕೆ ತದ್ವಿರುದ್ಧ. ಜನತಾ ಕರ್ಫ್ಯೂ ನಡುವೆಯೂ ದೆಹಲಿಯ ಶಾಹೀನ್ ಬಾಗ್‌ನಲ್ಲಿ ಸಿಎಎ ವಿರೋಧಿ ಪ್ರತಿಭಟನೆ ಮುಂದುವರೆದಿದ್ದು, ಪ್ರತಿಭಟನಾ ವಿರೋಧಿ ಗುಂಪೊಂದು ಪ್ರತಿಭಟನಾ ಸ್ಥಳದಲ್ಲಿ ಎಸೆದ ಘಟನೆ ನಡೆದಿದೆ. ಶಾಹೀನ್ ಬಾಗ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಆಗುಂತುಕರ ಗುಂಪೊಂದು, ಗೇಟ್‌ನ ಮುಂಭಾಗದಲ್ಲಿ ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾಗಿದೆ. ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಪೆಟ್ರೋಲ್ ಬಾಂಬ್ ಪ್ರತಿಭಟನಾ ಸ್ಥಳದ ಮುಂಭಾಗದಲ್ಲಿದ್ದ ಪೊಲೀಸ್ ಬ್ಯಾರಿಕೇಡ್‌ಗೆ ತಗುಲಿ ಅಲ್ಲೇ ಸ್ಫೋಟಗೊಂಡ ಪರಿಣಾಮ, ಯಾರಿಗೂ ಹಾನಿ ಸಂಭವಿಸಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಜಾಮಿಯಾ ವಿಶ್ವವಿದ್ಯಾಲಯದ ಬಳಿಯೂ ಆಗುಂತುಕರು ಪೆಟ್ರೋಲ್ ಬಾಂಬ್ ಎಸೆದಿದ್ದು, ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ಜನರಿಲ್ಲದ ಕಾರಣ ಹೆಚ್ಚಿನ ಹಾನಿ ಸಂಭವಿಸಿಲ್ಲ ಎನ್ನಲಾಗಿದೆ.


from India & World News in Kannada | VK Polls https://ift.tt/2wu5mxF

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...