ಬೆಂಗಳೂರು: ಕೊರೊನಾ ವೈರಸ್ ಕಾರಣದಿಂದಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ ಎಂಬುವುದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಕೊರೊನಾದಿಂದಾಗಿ ಎಸ್ಎಸ್‌ಎಲ್‌ಸಿ ಪರೀಕ್ಷೆ ರದ್ದಾಗಿದೆ ಎಂದು ಕೆಲವು ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿದ್ದವು. ಸಾಮಾಜಿಕ ಜಾಲತಾಣಗಳಲ್ಲೂ ಈ ಸುದ್ದಿ ಹರಿದಾಡುತ್ತಿದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಗೊಂದಲಕ್ಕೆ ಒಳಗಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಚಿವ ಸುರೇಶ್ ಕುಮಾರ್ ಟ್ವೀಟ್ ಮೂಲಕ ಇದಕ್ಕೆ ಸ್ಪಷ್ಟೀಕರಣ ನೀಡಿದ್ದಾರೆ. “ಕೆಲ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣದಲ್ಲಿಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ರದ್ದಾಗಿದೆ ಎಂಬ ಒಂದು ಅಪ್ಪಟ ಸುಳ್ಳು ಸುದ್ದಿ ಹರಿದಾಡುತ್ತಿದೆ. ರದ್ದು ಮಾಡುವ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪರೀಕ್ಷೆಗಳ ಕುರಿತು ಚರ್ಚಿಸಲು ಯಾವುದೇ ಸಭೆಯೂ ಆಗಿಲ್ಲ” ಎಂದಿದ್ದಾರೆ. ಕೊರೊನಾ ಕಾರಣದಿಂದಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಅಲ್ಲದೆ ಪಿಯುಸಿಯ ಕೊನೆಯ ಪರೀಕ್ಷೆಯನ್ನು ಮುಂದೂಡಲಾಗಿದೆ. ಆದರೆ ಪರೀಕ್ಷೆಗಳನ್ನು ರದ್ದು ಮಾಡುವ ಯಾವುದೇ ನಿರ್ಧಾರವನ್ನು ಸರ್ಕಾರ ಕೈಗೊಂಡಿಲ್ಲ. ಆದರೆ ಕೆಲವರು ಈ ಸಂದರ್ಭವನ್ನು ದುರುಪಯೋಗ ಪಡಿಸಿಕೊಂಡು ಸುಳ್ಳು ಸುದ್ದಿಯನ್ನು ಹರಡುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಚಿವ ಸುರೇಶ್ ಕುಮಾರ್ ಟ್ವೀಟ್ ಮಾಡುವ ಮೂಲಕ ವಿದ್ಯಾರ್ಥಿಗಳ ಗೊಂದಲವನ್ನು ಬಗೆಹರಿಸಿದ್ದಾರೆ.
from India & World News in Kannada | VK Polls https://ift.tt/2UiMpah