*ಬಾಗಲಕೋಟೆ: ಕೆಎಸ್ ಆರ್ ಟಿಸಿ ಬಸ್ ಸಂಚಾರ ಸಂಪೂರ್ಣ ಸ್ಥಗಿತ ಬಾಗಲಕೋಟೆ: ಕೊರೊನಾ ವೈರಸ್ ಸೋಂಕು ಹಿನ್ನಲೆಯಲ್ಲಿ ಬಾಗಲಕೋಟೆಯಲ್ಲಿ 2ನೇ ದಿನವೂ ಕೆಎಸ್ ಆರ್ ಟಿಸಿ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ನಗರದಿಂದ ತೆರಳುವ ಎಲ್ಲ ಕೆಎಸ್ ಆರ್ ಟಿಸಿ ಬಸ್ ಗಳ ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದೆ ಕೇಂದ್ರ ಬಸ್ ನಿಲ್ದಾಣ. ತುತು೯ ಅಗತ್ಯತೆ ಹೊರತುಪಡಿಸಿ ನಾಳೆ ಬೆಳಗಿನವರೆಗೂ ಬಸ್ ಸಂಚಾರ ಸ್ಥಗಿತಕ್ಕೆ ಸಾರಿಗೆ ಅಧಿಕಾರಿಗಳು ನಿಧಾ೯ರಿಸಿದ್ದಾರೆ. ಎಂದಿನಂತೆ ಆರಂಭವಾಗಿರೋ ಅಟೋ, ಟಂಟಂ, ಟ್ಯಾಕ್ಸಿ ಸೇರಿದಂತೆ ಖಾಸಗಿ ವಾಹನಗಳ ಓಡಾಟವಿದೆ. ಬೆಳಿಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳು ತೆರೆದಿದ್ದು, ಎಂದಿನಂತೆ ಜನಜೀವನ ಆರಂಭವಾಗಿದೆ. ಕೊಡಗು: ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ, ಕೊಡಗು ಲಾಕ್ ಡೌನ್ ಕೊಡಗು: ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆಯಾಗಿ ಕೊಡಗು ಜಿಲ್ಲೆಯನ್ನು ಲಾಕ್‌ಡೌನ್ ಮಾಡಲಾಗಿದೆ. ಹೊರ ಜಿಲ್ಲೆಗಳಿಂದ ಬರುವ ವಾಹನಗಳಿಗೆ ಜಿಲ್ಲೆಯ ಗಡಿಭಾಗದಲ್ಲಿ ತಡೆಹಿಡಿಯಲಾಗಿದ್ದು, ಬೆಳ್ಳಂಬೆಳಗ್ಗೆ ಗೇಟ್ ಬಂದ್ ಮಾಡಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಂಗಳೂರಿನಲ್ಲಿ ಮಲೇಷ್ಯಾದಿಂದ ಬಂದ ವ್ಯಕ್ತಿಗಳಿಬ್ಬರ ತಿರುಗಾಟ, ಆತಂಕದಲ್ಲಿ ಜನ ಮಂಗಳೂರು: ಭಾರತೀಯ ಮೂಲದ ಇಬ್ಬರು ವ್ಯಕ್ತಿಗಳು ಮಲೇಷ್ಯಾದಿಂದ ಆಗಮಿಸಿದ್ದು, ಮಂಗಳೂರು ನಗರದ ದೇರೆಬೈಲ್ ಕೊಂಚಾಡಿಯ ವಸತಿ ಕಾಲೊನಿಯಲ್ಲಿ ವಾಸಿಸುತ್ತಿದ್ದು, ಅವರಿಗೆ 14 ದಿನಗಳ ಕಾಲ ಮನೆಯಲ್ಲಿ ನಿಗಾದಲ್ಲಿಇರುವಂತೆ ಎಚ್ಚರಿಕೆ ನೀಡಿದರೂ ಸಾರ್ವಜನಿಕವಾಗಿ ತಿರುಗಾಡುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
from India & World News in Kannada | VK Polls https://ift.tt/3dmoles