ಪ್ರೇಮಸೌಧಕ್ಕೆ ಕೊರೊನಾ ಭೀತಿ: ತಾಜ್ ಬಾಗಿಲು ಬಂದ್ ಮಾಡಿದ ಸರ್ಕಾರ!

ಆಗ್ರಾ: ವಿಶ್ವವಿಶಖ್ಯಾತ ಪ್ರೇಮಸೌಧ ತಾಜ್ ಮಹಲ್‌ಗೂ ಕೊರೊನಾ ಭೀತಿ ಆವರಿಸಿದೆ. ಕೊರೊನಾ ವೈರಸ್ ಮುಂಜಾಗ್ರತಾ ಕ್ರಮದ ಭಾಗವಾಗಿ ಉತ್ತರಪ್ರದೇಶದ ಆಗ್ರಾದಲ್ಲಿರುವ ತಾಜ್ ಮಹಲ್‌ನ್ನು ಬಂದ್ ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಪ್ರವಾಸೋದ್ಯಮ ಸಚಿವ ಪ್ರಹ್ಲಾದ್ ಪಟೇಲ್, ಕೊರೊನಾ ಮುನ್ನೆಚ್ಚರಿಕೆ ಕ್ರಮದ ಭಾಗವಾಗಿ ಪ್ರವಾಸಿಗರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಕೇವಲ ತಾಜ್ ಮಾತ್ರವಲ್ಲದೇ ದೇಶದ ಎಲ್ಲಾ ಐತಿಹಾಸಿಕ ಸ್ಮಾರಕಗಳು, ಮ್ಯೂಸಿಯಂಗಳನ್ನೂ ಕೂಡ ಬಂದ್ ಮಾಡಲಾಗಿದ್ದು, ಕೊರೊನಾ ಭೀತಿ ಕಡಿಮೆಯಾಗುವರೆಗೂ ಸಾರ್ವಜನಿಕರು ಈ ಸ್ಥಳಗಳಿಗೆ ಭೇಟಿ ನೀಡದಂತೆ ಪ್ರವಾಸೋದ್ಯಮ ಇಲಾಖೆ ಮನವಿ ಮಾಡಿದೆ. ಭಾರತದಲ್ಲಿ ಕೊರೊನಾ ಪೀಡಿತರ ಸಂಖ್ಯೆ 114ಕ್ಕೆ ಏರಿದ್ದು, ಈಗಾಗಲೇ ಈ ಮಾರಕ ವೈರಾಣುವಿಗೆ ಇಬ್ಬರು ಬಲಿಯಾಗಿದ್ದಾರೆ.ದೇಶದಲ್ಲಿ ಕೊರೊನಾ ಹಾವಳಿ ಮತ್ತಷ್ಟು ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ. ಕಳೆದ ಫೇ.24ರಿಂದ ಎರಡು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಕುಟುಂಬ ಸಮೇತರಾಗಿ ತಾಜ್ ಮಹಲ್‌ಗೆ ಭೇಟಿ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.


from India & World News in Kannada | VK Polls https://ift.tt/3d3fhLa

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...