ಯತ್ನಾಳ್ ಸಮರ್ಥನೆ ಮಾಡುವುದು ಬಿಜೆಪಿ ಸಂಸ್ಕೃತಿ- ಡಿಕೆಶಿ ವಾಗ್ದಾಳಿ

ಮೈಸೂರು: ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌ ದೊರೆಸ್ವಾಮಿ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರನ್ನು ಸಮರ್ಥನೆ ಮಾಡಿಕೊಳ್ಳುವುದು ಬಿಜೆಪಿ ಸಂಸ್ಕೃತಿ ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನನ್ನ ವಿರುದ್ಧವೂ ಈ ಹಿಂದೆ ಯತ್ನಾಳ್‌ ಮಾತನಾಡಿದ್ದರು, ನಾನು ಮಾನನಷ್ಟ ಮೊಕದ್ದಮೆ ಹೂಡಿದ್ದೆ ಎಂದರು. ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಯ್ಕೆ ವಿಳಂಬಕ್ಕೆ ಪ್ರತಿಕ್ರಿಯಿಸಿ, ನಾನು ಕಾಂಗ್ರೆಸ್ ಕಾರ್ಯಕರ್ತನಾಗಿ ಕಾಂಗ್ರೆಸ್ ಕೆಲಸ ಮಾಡುತ್ತೇನೆ. ಶಾಸಕನಾಗಿ ವಿಧಾನಸೌಧದಲ್ಲಿ ಕೆಲಸ ಮಾಡುತ್ತೇನೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಯ್ಕೆ ವಿಳಂಬ ವಿಚಾರ ನನಗೆ ಗೊತ್ತಿಲ್ಲ. ಈ ಪ್ರಶ್ನೆಯಲ್ಲಿ ಹೈಕಮಾಂಡ್‌ ಅವರನ್ನು ಕೇಳಿ ಅಥವಾ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಅವರ ಹತ್ತಿರ ಕೇಳಿ ಎಂದು ಹೇಳುವ ಮೂಲಕ ಪ್ರತಿಕ್ರಿಯೆ ನೀಡದೇ ಜಾರಿಕೊಂಡರು. ಕಾಂಗ್ರೆಸ್‌ನಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ, ಮೂಲ ಹಾಗೂ ಹೊಸಬ ಎಂಬುವುದು ಕೇವಲ ಮಾಧ್ಯಮ ಸೃಷ್ಟಿ ಎಂದು ಸಮರ್ಥಿಸಿಕೊಂಡರು. ರಾಜಕೀಯದಲ್ಲಿ ಮೂವತ್ತು ನಲವತ್ತು ವರ್ಷಒಂದು ಪಕ್ಷದಲ್ಲಿ ಇದ್ದರೂ ಆ ಪಕ್ಷವನ್ನು ಬಿಟ್ಟು ಮತ್ತೊಂದು ಪಕ್ಷಕ್ಕೆ ಹೋಗುತ್ತಾರೆ. ಇದರ ಪರಿಣಾಮ ಬಿಜೆಪಿಯಲ್ಲಿ ಹಳಬರು ಸುಮ್ಮನೆ ಕೂತಿದ್ದಾರೆ ಹೊಸಬರು ಬಿಜೆಪಿಯನ್ನುನಡೆಸುತ್ತಾರೆ ಎಂದು ಕಾಂಗ್ರೆಸ್‌ನಿಂದ ವಲಸೆ ಹೋದ ನೂತನ ಬಿಜೆಪಿ ಸಚಿವರಿಗೆ ಟಾಂಗ್ ನೀಡಿದರು.


from India & World News in Kannada | VK Polls https://ift.tt/2TqYUzc

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...