ಭೀಮಾ-ಕೋರೆಗಾಂವ್‌ ಪ್ರಕರಣ: ತೇಲ್ತುಂಬ್ಡೆ, ನವಲಾಖಾಗೆ ಶರಣಾಗಲು ಸುಪ್ರೀಂ ಸೂಚನೆ

ಹೊಸದಿಲ್ಲಿ: ಮಹಾರಾಷ್ಟ್ರದ ಭೀಮಾ-ಕೋರೆಗಾಂವ್‌ ಹಿಂಸಾಚಾರ ಪ್ರಕರಣಕ್ಕೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಸಾಮಾಜಿಕ ಹೋರಾಟಗಾರರಾದ ಮತ್ತು ಅವರಿಗೆ ಮೂರು ವಾರಗಳ ಒಳಗೆ ಶರಣಾಗುವಂತೆ ಸುಪ್ರೀಂ ಕೋರ್ಟ್‌ ಸೋಮವಾರ ಆದೇಶಿಸಿದೆ. ಇಬ್ಬರೂ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಳ್ಳಿಹಾಕಿದ ನ್ಯಾಯಮೂರ್ತಿಗಳಾದ ಅರುಣ್‌ ಮಿಶ್ರಾ ಮತ್ತು ಎಂ.ಆರ್‌.ಶಾ ಅವರಿದ್ದ ದ್ವಿಸದಸ್ಯ ಪೀಠವು, ಕಾನೂನುಬಾಹಿರ ಚಟುವಟಿಕೆ ತಡೆ ಕಾಯಿದೆ (ಯುಎಪಿಎ) ಅಡಿ ದಾಖಲಾಗಿರುವ ಪ್ರಕರಣ ಕೈ ಬಿಡಲು ಯಾವುದೇ ಸಕಾರಣಗಳಿಲ್ಲ ಎಂದು ಅಭಿಪ್ರಾಯಪಟ್ಟಿತು. "ಕಳೆದ ಒಂದೂವರೆ ವರ್ಷದಿಂದ ಇಬ್ಬರೂ ಬಂಧನದಿಂದ ರಕ್ಷಣೆ ಪಡೆದಿದ್ದಾರೆ. ಹೀಗಾಗಿ ಇನ್ನು ಮೂರು ವಾರ ಒಳಗೆ ತನಿಖಾಧಿಕಾರಿಗಳ ಎದುರು ಶರಣಾಗಬೇಕು ಮತ್ತು ತಮ್ಮ ಪಾಸ್‌ಪೋರ್ಟ್‌ಗಳನ್ನೂ ತನಿಖಾಧಿಕಾರಿಗಳಿಗೆ ಒಪ್ಪಿಸಬೇಕು,'' ಎಂದು ಪೀಠವು ಆದೇಶಿಸಿತು. "ತೇಲ್ತುಂಬ್ಡೆ ಮತ್ತು ನವಲಾಖಾ ಇಬ್ಬರೂ ಮಾವೋವಾದಿಗಳಾಗಿದ್ದಾರೆ. ಪರಸ್ಪರ ಚಟುವಟಿಕೆಗಳಲ್ಲಿ ಸಹಕಾರವಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ನೀಡಬಾರದು," ಎಂದು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ವಾದಿಸಿದರು. ಆರೋಪಿಗಳ ಪರವಾಗಿ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ವಾದಿಸಿದರು.


from India & World News in Kannada | VK Polls https://ift.tt/3d5sAuM

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...