ಬಜೆಟ್ ಅಧಿವೇಶನ ನಿಲ್ಲಿಸಲು ಪ್ರಧಾನಿ ನಕಾರ: ಮೋದಿ ಕೊಟ್ಟ ಕಾರಣವಾದರೂ ಏನು?

ನವದೆಹಲಿ: ಭೀತಿ ನಡುವೆಯೂ ಪ್ರಸ್ತುತ ಬಜೆಟ್ ಅಧಿವೇಶನವನ್ನು ಮೊಟಕುಗೊಳಿಸಲು ಪ್ರಧಾನಿ ಮೋದಿ ನಿರಾಕರಿಸಿದ್ದು, ನಿಗದಿತ ವೇಳಾಪಟ್ಟಿಯಂತೆಯೇ ನಡೆಯಲಿ ಎಂದು ಹೇಳಿದ್ದಾರೆ. ದೇಶ ತೀವ್ರ ಆರೋಗ್ಯ ತುರ್ತು ಪರಿಸ್ಥಿತಿ ಎದುರಿಸುತ್ತಿದ್ದು, ಈ ಸಮಯದಲ್ಲಿ ಜನಪ್ರತಿನಿಧಿಗಳು ಕೆಲಸ ಮಾಡುವುದನ್ನು ಇಡೀ ದೇಶ ನೋಡಬೇಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಕೊರೊನಾ ಭೀತಿಯ ನಡುವೆಯೂ ಕೆಲಸ ಮಾಡಿ ಜನರಿಗೆ ಮಾದರಿಯಾಗೋಣ ಎಂದು ಪ್ರಧಾನಿ ಮೋದಿ ಸಂಸದರಲ್ಲಿ ಮನವಿ ಮಾಡಿದ್ದಾರೆ. ಕೊರೋನಾವೈರಸ್ ಬಗ್ಗೆ ಜಾಗೃತಿ ಮೂಡಿಸುವಂತೆ ತಾವು ಈಗಾಗಲೇ ಬಿಜೆಪಿ ಸಂಸದರಿಗೆ ಆದೇಶ ನೀಡಿದ್ದು, ಸಂಸತ್ತಿನ ಎಲ್ಲಾ ಸಂಸದರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಈ ಕೆಲಸ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಪ್ರಧಾನಿ ಮೋದಿ ಭರವಸೆ ವ್ಯಕ್ತಪಡಿಸಿದ್ದಾರೆ. ಜನಪ್ರತಿನಿಧಿಗಳು ನಿರ್ಭೀತಿಯಿಂದ ಕೆಲಸ ಮಾಡುವುದನ್ನು ನಾನು ನೋಡಬೇಕು. ಇದು ದೇಶಕ್ಕೂ ಉತ್ತಮ ಸಂದೇಶವನ್ನು ನೀಡಲಿದೆ. ಈ ಹಿನ್ನೆಲೆಯಲ್ಲಿ ಪ್ರಸಕ್ತ ಬಜೆಟ್ ಅಧಿವೇಶನವನ್ನು ಮೊಟಕುಗೊಳಿಸುವುದಿಲ್ಲ ಎಂದು ಪ್ರಧಾನಿ ಮೋದಿ ಸ್ಪಷ್ಟಪಡಿಸಿದರು. ಇದೇ ವೇಳೆ ಕೊರೋನಾವೈರಸ್ ಕಾರಣದಿಂದಾಗಿ ಅಧಿವೇಶನ ಮೊಟಕುಗೊಳಿಸುವಂತೆ ಪತ್ರ ಅಥವಾ ಕರೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ಎಚ್ಚರಿಕೆಯನ್ನೂ ನೀಡಿದ್ದಾರೆ ಎನ್ನಲಾಗಿದೆ. ಭಾರತದ 130 ಕೋಟಿಗೂ ಹೆಚ್ಚು ಜನರು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುತ್ತಾ ತಮ್ಮ ದೈನಂದಿನ ವ್ಯವಹಾರ ನಡೆಸುತ್ತಿದ್ದಾರೆ. ಈ ವೇಳೆ ಸಂಸದರು ತಮ್ಮ ಕರ್ತವ್ಯ ನಿರ್ವಹಿಸದಿದ್ದರೆ ಹೇಗೆ ಎಂದು ಪ್ರಧಾನಿ ಪ್ರಶ್ನಿಸಿದ್ದಾರೆ. ಕೊರೋನಾವೈರಸ್ ಹಿನ್ನೆಲೆಯಲ್ಲಿ ಸಂಸತ್ತಿನ ಉಭಯ ಸದನಗಳನ್ನು ಅನಿರ್ಧಿಷ್ಟಾವಧಿಗೆ ಮುಂದೂಡಬೇಕೆಂದು ಬಿಜೆಪಿ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ವಿಜಯ್ ಗೋಯೆಲ್ ಲೋಕಸಭಾ ಸ್ಪೀಕರ್ ಹಾಗೂ ರಾಜ್ಯಸಭಾ ಸಭಾಪತಿಗಳಿಗೆ ಪತ್ರ ಬರೆದಿದ್ದನ್ನು ಇಲ್ಲಿ ಸ್ಮರಿಸಬಹುದು.


from India & World News in Kannada | VK Polls https://ift.tt/39ZPuBJ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...