ಕೊರೊನಾ ಪರಿಹಾರ ನಿಧಿಗೆ ಕನಿಷ್ಠ 1 ಲಕ್ಷ ದೇಣಿಗೆ ನೀಡಿ; ಶಾಸಕರು, ಸಂಸದರಿಗೆ ಸಿದ್ದರಾಮಯ್ಯ ಮನವಿ

ಬೆಂಗಳೂರು: ಕೆಪಿಸಿಸಿ ಆರಂಭಿಸಿರುವ ಕೊರೊನ ಪರಿಹಾರ ನಿಧಿಗೆ ವೈಯಕ್ತಿಕವಾಗಿ ತಲಾ ಕನಿಷ್ಟ ಒಂದು ಲಕ್ಷ ರೂಪಾಯಿ ದೇಣಿಗೆಯಾಗಿ ನೀಡುವಂತೆ ಕಾಂಗ್ರೆಸ್ ಪಕ್ಷದ ಶಾಸಕರು, ಸಂಸದರಿಗೆ ವಿಧಾನಸಭೆಯ ವಿಪಕ್ಷ ನಾಯಕರಾದ ಮನವಿ ಮಾಡಿದ್ದಾರೆ. ಕೊರೊನ ವೈರಸ್ ರಾಜ್ಯದ ಜನತೆಯನ್ನು ತೀವ್ರ ಸಂಕಷ್ಟಕ್ಕೀಡು ಮಾಡಿದೆ. ಇದರಿಂದಾಗಿ ದುಡಿಯುವ ವರ್ಗಕ್ಕೆ ಉದ್ಯೋಗಗಳಿಲ್ಲದೆ ಆಹಾರ,ನೀರು,ಔಷಧಿಗಳಿಗೆ ಪರದಾಡಬೇಕಾದ ಪರಿಸ್ಥಿತಿ ಉಂಟಾಗಿದೆ. ಮೊದಲೇ ಪ್ರವಾಹದಿಂದ ನಲುಗಿದ್ದ ನಾಡಿನ ರೈತ,ಕೂಲಿ ಕಾರ್ಮಿಕರನ್ನೂ ಸಹ ಈ ವೈರಸ್ ಕಂಗೆಡುವಂತೆ ಮಾಡಿದೆ. ಈ ಸಂದರ್ಭದಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳೆರಡೂ ಸನ್ನಿವೇಶವನ್ನು ಸಮರ್ಪಕವಾಗಿ ನಿಭಾಯಿಸಬೇಕಾಗಿತ್ತು. ಆದರೆ ಎರಡೂ ಸರ್ಕಾರಗಳಿಂದ ಪರಿಹಾರ ಕಾರ್ಯ ಸೂಕ್ತವಾಗಿ ನಡೆಯುತ್ತಿಲ್ಲ.ಈ ನಿಟ್ಟಿನಲ್ಲಿ ನಾವೆಲ್ಲರೂ ಜನ ಕಂಗೆಡದಂತೆ ಅವರ ಜೊತೆ ನಿಂತು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾಗಿದೆ ಎಂದಿದ್ದಾರೆ. ಆದ್ದರಿಂದ ನಮ್ಮ ಪಕ್ಷದ ಶಾಸಕರು, ಸಂಸದರು ವೈಯಕ್ತಕವಾಗಿ ತಲಾ ಕನಿಷ್ಟ ಒಂದು ಲಕ್ಷ ರೂ. ಗಳ ದೇಣಿಗೆ ನೀಡಬೇಕೆಂದು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಅಲ್ಲದೆ, ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿದ್ದುಕೊಂಡು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕೆಂದು ಸೂಚಿಸಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಬಿಎಸ್‌ ಯಡಯೂರಪ್ಪ ಕೂಡ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಮ್ಮ ಒಂದು ವರ್ಷದ ವೇತನವನ್ನು ನೀಡಿದ್ದಾರೆ. ಅಲ್ಲದೆ ಎಲ್ಲಾ ಶಾಸಕರು ಹಾಗೂ ಸಂಸದರು ಇದೇ ರೀತಿಯಾಗಿ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.


from India & World News in Kannada | VK Polls https://ift.tt/3bEoY19

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...