ರಾಜ್ಯದಲ್ಲಿ ಕೊರೊನಾ ಅಟ್ಟಹಾಸ; ಮತ್ತೆ 15 ಮಂದಿಗೆ ಪಾಸಿಟಿವ್‌, ಹೊಂಗಸಂದ್ರದಲ್ಲಿ ಬಿಹಾರಿ ಕಾರ್ಮಿಕನಿಂದ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿಯ ಅಟ್ಟಹಾಸ ಹೆಚ್ಚುತ್ತಲೇ ಇದೆ. ಅದರಲ್ಲೂ ರಾಜಧಾನಿ ಬೆಂಗಳೂರಿನ ಹೊಂಗಸಂದ್ರದಲ್ಲಿ ಬಿಹಾರಿ ಕಾರ್ಮಿಕನಿಂದ ಸೋಂಕು ಹರಡುತ್ತಿರುವುದು ಹೆಚ್ಚಾಗಿದೆ. ಶನಿವಾರ ಒಟ್ಟು ಆರು ಮಂದಿಗೆ ಬಿಹಾರಿ ಕಾರ್ಮಿಕನಿಂದ ಸೋಂಕು ಹರಡಿದೆ. ಒಟ್ಟಾರೆ ಬಿಹಾರಿ ಕಾರ್ಮಿಕನಿಂದ ಬೆಂಗಳೂರಿನಲ್ಲಿ ಒಟ್ಟು 25 ಮಂದಿಗೆ ಸೋಂಕು ಹರಡಿದಂತಾಗಿದೆ. ರಾಜಧಾನಿಯಲ್ಲಿ ಆತಂಕ ಇದ್ದಂತೆ ಬಿಹಾರಿ ಕಾರ್ಮಿಕನಿಂದ ಸೋಂಕು ನಿರಂತರವಾಗಿ ಹರಡುತ್ತಿದೆ. ಈತ 180ಕ್ಕೂ ಹೆಚ್ಚು ಮಂದಿಯ ಜತೆ ಸಂಪರ್ಕ ಹೊಂದಿದ್ದಾನೆ ಎಂದು ತಿಳಿದುಬಂದಿದೆ. ಈಗಾಗಲೇ 25ಕ್ಕೂ ಹೆಚ್ಚು ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 15 ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ಬಿಟ್ಟರೆ ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ ಒಟ್ಟು 6 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಬೆಳಗಾವಿ ಈಗ ಕೊರೊನಾ ಹಾಟ್‌ಸ್ಪಾಟ್‌ ಆಗಿ ಪರಿವರ್ತಿತವಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಬೆಳಗಾವಿಯಲ್ಲಿ ನಿರಂತರವಾಗಿ ಸೋಂಕು ಹರಡುತ್ತಿರುವ ಪ್ರಕರಣಗಳು ಪತ್ತೆಯಾಗಿವೆ. ಈಗ ಶನಿವಾರ ಕೂಡ 6 ಪ್ರಕರಣ ಪತ್ತೆಯಾಗಿದೆ. ಇದಲ್ಲದೇ ಮಂಡ್ಯ, ಚಿಕ್ಕಬಳ್ಳಾಪುರ ಮತ್ತು ಬಂಟ್ವಾಳದಲ್ಲಿ ಒಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಶನಿವಾರ ಒಟ್ಟು 9 ಪುರುಷರಿಗೆ ಹಾಗೂ 6 ಮಹಿಳೆಯರಿಗೆ ಕೊರೊನಾ ಸೋಂಕು ತಗುಲಿದೆ.


from India & World News in Kannada | VK Polls https://ift.tt/2Y5ZeqL

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...