ಬೆಂಗಳೂರು: ರಾಜ್ಯದಲ್ಲಿ ಮೇ. 15ರವರೆಗೆ ಮುಂದುವರಿಸಬೇಕಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಸೋಮವಾರ ಪ್ರಧಾನಿ ಮೋದಿ ಅವರೊಂದಿನ ಮುಖ್ಯಮಂತ್ರಿಗಳ ಸಭೆಯಲ್ಲಿ ಲಾಕ್ಡೌನ್ ಕುರಿತು ರಾಜ್ಯದ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರದಾನಿ ಮೋದಿ ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಲಾಕ್ಡೌನ್ ವಿಸ್ತರಣೆ ಕುರಿತು ಸಭೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ರಾಜ್ಯದಲ್ಲಿ ಮೇ. 15ರವೆರಗೆ ಲಾಕ್ಡೌನ್ ವಿಸ್ತರಿಸಬೇಕಾದ ಅಗತ್ಯತೆ ಇದೆ. ಆದರೆ, ವಲಯವಾರು ಲಾಕ್ಡೌನ್ಗೆ ವಿನಾಯಿತಿ ನೀಡಬೇಕು ಎಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದಾರೆ. ರಾಜ್ಯದ ಹಸಿರು ವಲಯದ ಜಿಲ್ಲೆಗಳಲ್ಲಿ ಆರ್ಥಿಕ ಚಟುವಟಿಕೆಗಳು ಪುನಾರಂಭ ಆಗಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿಕೊಂಡರು. ಮೇ.3ರ ನಂತರ ಎಷ್ಟು ದಿನಗಳ ಲಾಕ್ ಮುಂದುವರಿಯುತ್ತೆ ಎಂಬುದನ್ನು ಕೇಂದ್ರ ಸರಕಾರ ಘೋಷಣೆ ಮಾಡಬೇಕಿದೆ. ಮುಂದೆ ಏನು ಮಾಡಬೇಕು ಎಂಬುದನ್ನು ಮೇ.3ರ ನಂತರವೇ ಪ್ರಧಾನಿ ಮೋದಿ ಘೋಷಣೆ ಮಾಡಲಿದ್ದಾರೆ.
from India & World News in Kannada | VK Polls https://ift.tt/2KGb8ja