ಚೀನಾದ ನಲ್ಲಿ ಮೊದಲು ಪತ್ತೆಯಾಗಿದ್ದ ವಿಶ್ವಾದ್ಯಂತ 1 ಲಕ್ಷದ 84 ಸಾವಿರಕ್ಕೂ ಹೆಚ್ಚು ಮಂದಿಯನ್ನು ಬಲಿಪಡೆದಿದೆ. ಭಾರತದಲ್ಲಿ 21,000ಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಕರ್ನಾಟಕದಲ್ಲಿ 400ಕ್ಕೂ ಹೆಚ್ಚು ಪ್ರಕರಣ ಬೆಳಕಿಗೆ ಬಂದಿದೆ. ಏಪ್ರಿಲ್ 24ರ ಕ್ಷಣಕ್ಷಣದ ಮಾಹಿತಿ ಇಲ್ಲಿದೆ:- -ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 445ಕ್ಕೆ ಏರಿಕೆಯಾಗಿದೆ. 145 ಮಂದಿ ಗುಣಮುಖರಾಗಿದ್ದು 18ಮಂದಿ ಮೃತಪಟ್ಟಿದ್ದಾರೆ. ಸೋಂಕಿತ ಪ್ರಕರಣಗಳ ಪಟ್ಟಿಯಲ್ಲಿ ರಾಜ್ಯ 12ನೇ ಸ್ಥಾನದಲ್ಲಿದೆ.
-ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಸೋಂಕಿತರ ಸಂಖ್ಯೆ 23,039ಕ್ಕೆ ಏರಿಕೆಯಾಗಿದೆ. 5,012 ಮಂದಿ ಗುಣಮುಖರಾಗಿದ್ದು, 721 ಮಂದಿ ಸಾವನ್ನಪ್ಪಿದ್ದಾರೆ. -ಅಮೆರಿಕದಲ್ಲಿ ಅತೀ ಹೆಚ್ಚು ಮಂದಿ ಸೋಂಕಿಗೆ ಒಳಗಾಗಿದ್ದು. ಸೋಂಕಿತ ಪ್ರಕರಣಗಳಲ್ಲಿ ಮೊದಲ ಸ್ಥಾನದಲ್ಲಿದೆ. ಇಲ್ಲಿ 8ಲಕ್ಷದ 86ಸಾವಿರಕ್ಕೂ ಹೆಚ್ಚು ಮಂದಿ ಸೋಂಕಿತರಿದ್ದು, 50,200ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರ ಪಟ್ಟಿಯಲ್ಲಿ ಕೂಡ ಮೊದಲನೇ ಸ್ಠಾನದಲ್ಲಿದೆ. -ಸೋಂಕಿತ ಪ್ರಕರಣಗಳಲ್ಲಿ ಎರಡನೇ ಸ್ಥಾನದಲ್ಲಿ ಸ್ಪೇನ್ ಇದ್ದು 2 ಲಕ್ಷದ 13 ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದೆ. 22,100ಕ್ಕೂ ಹೆಚ್ಚು ಮಂದಿ ಕೊರೊನಾಗೆ ಇಲ್ಲಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಚಾರ್ಟ್ ನಲ್ಲಿ ಮೂರನೇ ಸ್ಥಾನದಲ್ಲಿದೆ. -ಇಟಲಿ ಮೃತಪಟ್ಟವರ ಚಾರ್ಟ್ ನಲ್ಲಿ ಎರಡನೇ ಸ್ಥಾನದಲ್ಲಿದೆ. ಇಲ್ಲಿ 1 ಲಕ್ಷದ 89ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. 25,500ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿ ತಿಳಿಸಿದೆ. ಸೋಂಕಿತರ ಪಟ್ಟಿಯಲ್ಲಿ ಇಟಲಿ ಮೂರನೇ ಸ್ಥಾನದಲ್ಲಿದೆ.
-ವಿಶ್ವದಾದ್ಯಂತ 1 ಲಕ್ಷ91 ಸಾವಿರಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದೆ. 27 ಲಕ್ಷದ 25ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ. ಇದರಲ್ಲಿ7 ಲಕ್ಷದ 45ಸಾವಿರ ಮಂದಿ ಗುಣಮುಖರಾಗಿದ್ದಾರೆ.
from India & World News in Kannada | VK Polls https://ift.tt/3eNyZvm