ವಿಶ್ವಾದ್ಯಂತ 25 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರು, 1.77 ಲಕ್ಷ ಮಂದಿ ಬಲಿ

ವಾಷಿಂಗ್ಟನ್: ವಿಶ್ವದ 130ಕ್ಕೂ ಹೆಚ್ಚು ರಾಷ್ಟ್ರಗಳಿಗೆ ಮಹಾಮಾರಿಯಂತೆ ಹಬ್ಬಿರುವ ಕೊರೊನಾ ವೈರಸ್ ಎಲ್ಲೆಡೆ ಮರಣ ಮೃದಂಗ ಮುಂದುವರಿಸಿದೆ. ವಿಶ್ವಾದ್ಯಂತ ಸೋಂಕಿತರ ಸಂಖ್ಯೆ 25 ಲಕ್ಷ ಗಡಿದಾಟಿದೆ. ಅಂತೆಯೇ ಈ ವರೆಗೂ 1.77 ಲಕ್ಷ ಮಂದಿ ಮಾರಕ ಕೊರೊನಾಗೆ ಬಲಿಯಾಗಿದ್ದಾರೆ. ಸುಮಾರು 7ಲಕ್ಷ ಸೋಂಕಿತರು ಪೂರ್ಣವಾಗಿ ಗುಣವಾಗಿದ್ದಾರೆ. ಈಗಾಗಲೇ ವಿಶ್ವಾದ್ಯಂತ ಕೊರೋನಾ ವೈರಸ್ನಿಂದ ಏ.22ರ ವರೆಗೆ 1,77,775 ಜನರು ಸಾವನ್ನಪ್ಪಿದ್ದಾರೆ. ಇದುವರೆಗೆ ಒಟ್ಟು 25,65,299 ಜನರಿಗೆ ತಗುಲಿದೆ. ಈ ಪೈಕಿ 6,96,779 ಜನರು ಚಿಕಿತ್ಸೆ ಪಡೆದು, ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೋನಾ ಸೋಂಕಿತ ದೇಶಗಳಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದ್ದು, 8.19 ಲಕ್ಷ ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಇದುವರೆಗೂ ಅಮೆರಿಕದಲ್ಲಿ 45,343 ಜನರು ಕೊರೋನಾದಿಂದ ಸಾವನ್ನಪ್ಪಿದ್ದಾರೆ. 2ನೇ ಸ್ಥಾನದಲ್ಲಿರುವ ಸ್ಪೇನ್ನಲ್ಲಿ 2.4 ಲಕ್ಷ ಜನರಿಗೆ ಸೋಂಕು ಪತ್ತೆಯಾಗಿದ್ದು, 21,283 ಜನ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ 2,141ಕ್ಕೂ ಹೆಚ್ಚು ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ಅಮೆರಿಕದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 45 ಸಾವಿರ ಗಡಿ ದಾಟಿದೆ ಎಂದು ತಿಳಿದುಬಂದಿದೆ. 8.19 ಲಕ್ಷ ಮಂದಿಯಲ್ಲಿ ಸೋಂಕಿರುವುದು ದೃಢಪಟ್ಟಿದೆ. ಕೊರೋನಾ ಸೋಂಕಿತ ದೇಶಗಳಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದ್ದು, 8.19 ಲಕ್ಷ ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಇದುವರೆಗೂ ಅಮೆರಿಕದಲ್ಲಿ 45,343 ಜನರು ಕೊರೋನಾದಿಂದ ಸಾವನ್ನಪ್ಪಿದ್ದಾರೆ. 2ನೇ ಸ್ಥಾನದಲ್ಲಿರುವ ಸ್ಪೇನ್ನಲ್ಲಿ 2.4 ಲಕ್ಷ ಜನರಿಗೆ ಸೋಂಕು ಪತ್ತೆಯಾಗಿದ್ದು, 21,283 ಜನ ಸಾವನ್ನಪ್ಪಿದ್ದಾರೆ. ಇನ್ನು ಅಮೆರಿಕದಲ್ಲಿ ಕೊರೋನಾ ವೈರಸ್ ಗೆ ನಿತ್ಯ 2 ಸಾವಿರ ಮಂದಿ ಬಲಿಯಾಗುತ್ತಿದ್ದು, ಇದೇ ಕಾರಣಕ್ಕೆ ನ್ಯೂಯಾರ್ಕ್ ಗವರ್ನರ್ ಕೋವಿಡ್-19 ಪರೀಕ್ಷಾ ಸಾಮರ್ಥ್ಯವನ್ನು ದುಪ್ಪಟ್ಟುಗೊಳಿಸಿದ್ದಾರೆ. ಇಟಲಿಯಲ್ಲಿ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದು, ಸಾವನ್ನಪ್ಪಿದವರ ಸಂಖ್ಯೆ 24,648 ಆಗಿದೆ. ಸ್ಪೇನ್ನಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷದ ಗಡಿ ತಲುಪಿದೆ. 21 ಸಾವಿರ ಮಂದಿ ಮೃತಪಟ್ಟಿದ್ದಾರೆ. ಇಟಲಿಯಲ್ಲಿ 1.83 ಲಕ್ಷ ಜನರಿಗೆ ಸೋಂಕು ಅಂಟಿದ್ದು, ಸಾವಿನ ಸಂಖ್ಯೆ 24 ಸಾವಿರದ ಗಡಿ ತಲುಪಿದೆ. ಈ ಮೊದಲ ವಾರಗಳಿಗೆ ಹೋಲಿಸಿದರೆ ಇಟಲಿಯಲ್ಲಿ ಕೊರೋನಾ ಕೊಂಚ ನಿಯಂತ್ರಣಕ್ಕೆ ಬಂದಿದೆ ಎನ್ನಬಹುದು. ಫ್ರಾನ್ಸ್, ಜರ್ಮನಿ, ಇಂಗ್ಲೆಂಡ್ನಲ್ಲೂ ಪರಿಸ್ಥಿತಿ ಕೈ ಮೀರಿದೆ. ಫ್ರಾನ್ಸ್ನಲ್ಲಿ 1.58 ಲಕ್ಷ ಮಂದಿಗೆ ಕೊರೋನಾ ದೃಢಪಟ್ಟಿದೆ. 20 ಸಾವಿರ ಮಂದಿ ಮೃತಪಟ್ಟಿದ್ದಾರೆ. ಜರ್ಮನಿಯಲ್ಲಿ 1.48 ಲಕ್ಷ ಜನರಿಗೆ ಕೊರೋನಾ ಸೋಂಕಿದೆ. 5086 ಜನರು ಮೃತಪಟ್ಟಿದ್ದಾರೆ. ಬ್ರೆಜಿಲ್ ನಲ್ಲಿ 2,741 ಮಂದಿ ಸಾವನ್ನಪ್ಪಿದ್ದು, ಅಂತೆಯೇ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 43,079ಕ್ಕೆ ಏರಿಕೆಯಾಗಿದೆ.


from India & World News in Kannada | VK Polls https://ift.tt/2KrhsuR

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...